ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ, 8 ಬೈಕ್ ಗಳು ಭಸ್ಮ

ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.

ರಾಜಧಾನಿ ಬೆಂಗಳೂರು ನಗರದ ಜೋಗುಪಾಳ್ಯದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕಿನ್ನಾಲೆಗೆ 8 ಬೈಕ್ ಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ರವಿಕುಮಾರ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಡಿ ಕೈಗಾರಿಕೆ ರೀತಿ ಕಳೆದ 5 ವರ್ಷಗಳಿಂದ ಚೋಳರಪಾಳ್ಯದ ಮನೆಯಲ್ಲೇ ಅಗರಬತ್ತಿ ಸಣ್ಣ ಕಾರ್ಖಾನೆ ನಡೆಸಲಾಗುತ್ತಿತ್ತು. ಮನೆಯ ಕೆಳ ಮಹಡಿಯಲ್ಲಿ ಅಗರಬತ್ತಿ ತಯಾರಿಕೆಗೆ ಬೇಕಾಗಿದ್ದ ದ್ರವ ರೂಪದ ರಾಸಾಯನಿಕಗಳನ್ನು ಶೇಖರಿಸಿ ಇಡಲಾಗಿತ್ತು. ಈ ಪ್ರದೇಶದಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳು ತುಂಬಿದ್ದ ದೊಡ್ಡ ಕ್ಯಾನ್‌ಗಳು ಸಿಡಿದಿವೆ. ಆ ಸಂದರ್ಭದಲ್ಲಿ ಮನೆ, ಪಕ್ಕದ ಕಟ್ಟಡ ಹಾಗೂ ರಸ್ತೆಗೂ ಬೆಂಕಿ ಆವರಿಸಿದೆ.

ಈ ಸಂದರ್ಭದಲ್ಲಿ ಮನೆ ಮುಂದೆ ನಿಲ್ಲಿಸಿದ್ದ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ ರವಿ ಕುಮಾರ್‌ ಅವರಿಗೆ ತೀವ್ರಗಾಯಗಳಾಗಿದ್ದು, ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಬಂದ 3 ಅಗ್ನಿ ಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು
 
ಈ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿ ಶಾಮಕ ಸಿಬ್ಬಂದಿ ಪೊಲೀಸರು ತನಿಖೆ ನಡೆಸುತ್ತಿದ್ದು, ವಿದ್ಯುತ್ ಶಾಕ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಈ ಕಾರ್ಖಾನೆ ಪರವಾನಗಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT