ರಾಜ್ಯ

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸರ್ಕಾರ ಚಿಂತನೆ: ಸಚಿವ ಹೆಚ್ ಸಿ ಮಹದೇವಪ್ಪ

Manjula VN

ಮೈಸೂರು: ಧಾರ್ಮಿಕ, ವೈಚಾರಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಕುರಿತು ಚಿಂತನೆಗಳ ನಡೆಸಲಾಗುತ್ತಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಅವರು ಭಾನುವಾರ ಹೇಳಿದರು.

ಚಾಮುಂಡಿಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ದಸರಾ ಸಾಂಸ್ಕೃತಿ ಕಾರ್ಯಕ್ರಮಗಳ ಜನರನ್ನು ಆಕರ್ಷಿಸುವ ಹಬ್ಬವಾಗಿದ್ದು, ಇದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಮತ್ತು ಅಭಿವೃದ್ಧಿಯಿಂದ ರಾಜ್ಯ ಸರ್ಕಾರ ಪ್ರೇರಿತವಾಗಿದ್ದು, ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಬದ್ಧವಾಗಿದ್ದೇವೆಂದು ತಿಳಿಸಿದರು.

ಪ್ರಗತಿಪರ ಚಿಂತನೆಗಳು, ಸಾಮಾಜಿಕ ಬದ್ಧತೆ, ಬಡವರು ಮತ್ತು ರೈತರ ಬಗ್ಗೆ ಅವರಿಗಿದ್ದ ಸಹಾನುಭೂತಿಯಿಂದ ಇಡೀ ವಿಶ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಗೌರವಿಸುತ್ತದೆ. ನಾದಬ್ರಹ್ಮ ಹಂಸಲೇಖ ಅವರು, ಈ ವರ್ಷ ದಸರಾ ಉತ್ಸವವನ್ನು ಉದ್ಘಾಟಿಸಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದರು.

SCROLL FOR NEXT