ಡಬಲ್ ಡೆಕ್ಕರ್ ಬಸ್ ಗಳ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಜಿಸಿಸಿ ಮಾದರಿಯಲ್ಲಿ ಡಬಲ್ ಡೆಕ್ಕರ್ ಬಸ್ಸುಗಳ ಕಾರ್ಯಾಚರಣೆಗೆ ಬಿಎಂಟಿಸಿ ಮುಂದು!

ಒಟ್ಟು ವೆಚ್ಚದ ಒಪ್ಪಂದ (ಜಿಸಿಸಿ) ಮಾದರಿಯು ನೇರ ಖರೀದಿಗಿಂತ ಅಗ್ಗವಾಗಿರುವುದರಿಂದ ಈ ಹಿಂದೆ ಹತ್ತು ಡಬಲ್ ಡೆಕ್ಕರ್ ಬಸ್‌ಗಳನ್ನು ಖರೀದಿಸಲು ಯೋಜಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡಬಲ್ ಡೆಕ್ಕರ್ ವಿದ್ಯುತ್ ಚಾಲಿತ ಬಸ್ಸುಗಳ ಕಾರ್ಯಾಚರಣೆಗೆ ಜಿಸಿಸಿ ಮಾದರಿಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ.

ಬೆಂಗಳೂರು: ಒಟ್ಟು ವೆಚ್ಚದ ಒಪ್ಪಂದ (ಜಿಸಿಸಿ) ಮಾದರಿಯು ನೇರ ಖರೀದಿಗಿಂತ ಅಗ್ಗವಾಗಿರುವುದರಿಂದ ಈ ಹಿಂದೆ ಹತ್ತು ಡಬಲ್ ಡೆಕ್ಕರ್ ಬಸ್‌ಗಳನ್ನು ಖರೀದಿಸಲು ಯೋಜಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡಬಲ್ ಡೆಕ್ಕರ್ ವಿದ್ಯುತ್ ಚಾಲಿತ ಬಸ್ಸುಗಳ ಕಾರ್ಯಾಚರಣೆಗೆ ಜಿಸಿಸಿ ಮಾದರಿಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ.

ಡಬ್ಬಲ್ ಡೆಕ್ಕರ್ ಬಸ್‌ಗಳನ್ನು ನೇರವಾಗಿ ಖರೀದಿಸುವುದರಿಂದ ಹಣದ ಕೊರತೆ ಎದುರಿಸುತ್ತಿರುವ ನಿಗಮಕ್ಕೆ ಭಾರಿ ಆರ್ಥಿಕ ಹೊರೆಯಾಗುವುದರಿಂದ ಜಿಸಿಸಿ ಮಾದರಿಯಲ್ಲಿ ಕಾರ್ಯನಿರ್ವಹಿಸಲು ನಿರ್ಧರಿಸಿದ್ದೇವೆ ಎಂದು ಬಿಎಂಟಿಸಿ ಎಂಡಿ ಸತ್ಯವತಿ ಹೇಳಿದ್ದಾರೆ.

ಜಿಸಿಸಿ ಮಾದರಿಯಲ್ಲಿ, ಬಿಎಂಟಿಸಿ ಕಂಡಕ್ಟರ್ ಅನ್ನು ಮಾತ್ರ ಒದಗಿಸಬೇಕಾಗುತ್ತದೆ. ಸಂಪೂರ್ಣ ಕಾರ್ಯಾಚರಣೆ, ನಿರ್ವಹಣೆ ಮತ್ತು ಚಾಲಕರನ್ನು ಖಾಸಗಿಯವರಿಂದ ಒದಗಿಸಲಾಗುತ್ತದೆ ಮತ್ತು ಒಂದು ಕಿಲೋಮೀಟರ್ ಆಧಾರದ ಮೇಲೆ ಖಾಸಗಿ ಪೂರೈಕೆದಾರರಿಗೆ ನಿಗದಿತ ಕಾರ್ಯಾಚರಣೆಯ ವೆಚ್ಚವನ್ನು ಪಾವತಿಸಲಾಗುತ್ತದೆ. ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್‌ಗಳನ್ನು ತರಲು ಹಲವು ಬಾರಿ ಪ್ರಯತ್ನಗಳು ನಡೆದಿತ್ತು ಮತ್ತು ಹತ್ತು ಬಸ್‌ಗಳ ಖರೀದಿಗೆ ಟೆಂಡರ್‌ ಕರೆಯಲಾಗಿತ್ತು. ಅಶೋಕ್ ಲೇಲ್ಯಾಂಡ್‌ನ ಎಲೆಕ್ಟ್ರಿಕ್ ವೆಹಿಕಲ್ ಆರ್ಮ್ ಸ್ವಿಚ್ ಮೊಬಿಲಿಟಿ  ಐದು ಬಸ್‌ಗಳನ್ನು ಪೂರೈಸಲು 10 ಕೋಟಿ ರೂ. ಗೆ ಬಿಡ್ ಸಲ್ಲಿಸಿತ್ತು.

ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಡ್‌ದಾರರಿಗೆ ಹೆಚ್ಚಿನ ಬೆಲೆ ನೀಡಿದ್ದಾರೆ ಎಂದು ಉಲ್ಲೇಖಿಸಿ ಟೆಂಡರ್  ರದ್ದುಗೊಳಿಸಲಾಯಿತು. ಸೆಪ್ಟೆಂಬರ್‌ನಲ್ಲಿ ಹೊಸ ಟೆಂಡರ್  ಕರೆಯಲು ಬಿಎಂಟಿಸಿ ಸಜ್ಜಾಗಿತ್ತು, ಆದರೆ ಈಗ, ಜಿಸಿಸಿ ಮಾದರಿಯ ಅಡಿಯಲ್ಲಿ ಕಾರ್ಯಾಚರಣೆಗೆ ಹೋಗಲು ಬಯಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT