ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ, ತನಿಖೆ ಆರಂಭ

ಮಹಾಲಕ್ಷ್ಮಿ ಲೇಔಟ್ ಸಮೀಪದ ಕುರುಬರಹಳ್ಳಿಯಲ್ಲಿ ಅಪರಿಚತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಮೀಪದ ಕುರುಬರಹಳ್ಳಿಯಲ್ಲಿ ಅಪರಿಚತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಿರ್ಮಾಣ ಹಂತದ ಕಟ್ಟಡದ ಮುಂದೆ ಮರಳಿನ ರಾಶಿ ಹಾಕಲಾಗಿದ್ದು, ಮರಳಿನ ರಾಶಿಯಡಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮರಳಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರ, ಶವ ಇರುವಿಕೆಯನ್ನು ಪತ್ತೆ ಮಾಡಿ ಪೊಲೀರಿಗೆ ಮಾಹಿತಿ ನೀಡಿದ್ದರು.

ಸ್ಥಳದಲ್ಲಿ ಚಾಪೆ ಹಾಗೂ ಬೆಡ್ ಶೀಟ್ ಕೂಡ ಪತ್ತೆಯಾಗಿದೆ. ಮೃತ ವ್ಯಕ್ತಿ ಮರಳು ತಂದ ಲಾರಿಯಲ್ಲಿ ಮಲಗಿರಬಹುದು. ದೇಹದ ಮೇಲೆ ಯಾವುದೇ ಗಾಯಗಳೂ ಕಂಡು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವೈದ್ಯಕೀಯ ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ  ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT