ಲಾಂಛನ ಬಿಡುಗಡೆ ಮಾಡಿದ ಸಿಎಂ 
ರಾಜ್ಯ

ಕಡತಗಳಿಗೆ ಇಂಗ್ಲಿಷಿನಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಿ; ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಬೆಂಗಳೂರು: ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಹೊರ ರಾಜ್ಯಗಳ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಜತೆ ವ್ಯವಹರಿಸುವಾಗ ಅನಿವಾರ್ಯವಾಗಿ ಇಂಗ್ಲಿಷ್ ಬಳಸಬೇಕಾಗುತ್ತದೆ. ರಾಜ್ಯ ಸರ್ಕಾರದ ಒಳಗಿನ ಆಡಳಿತ ವ್ಯವಹಾರಗಳಲ್ಲಿ ಇಂಗ್ಲಿಷ್ ಬಳಕೆ ಅನಗತ್ಯ. ಆ ರೀತಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದು, ಕಡತ ಮಂಡಿಸುವುದನ್ನು ಕೈಬಿಟ್ಟು ಸಂಪೂರ್ಣವಾಗಿ ಕನ್ನಡ ಬಳಕೆ ಮಾಡಬೇಕು ಎಂದರು.

ಇತರ ಭಾಷೆ, ಧರ್ಮಗಳನ್ನೂ ಪ್ರೀತಿಸಬೇಕು. ಆದರೆ, ಕನ್ನಡವನ್ನೇ ಹೆಚ್ಚು ಬಳಕೆ ಮಾಡಬೇಕು. ಕನ್ನಡವನ್ನು ಮತ್ತಷ್ಟು ಸಮೃದ್ಧಗೊಳಿಸುವ ಕೆಲಸ ಮಾಡಬೇಕು. ಇತರ ಭಾಷೆಗಳ ಬಗೆಗಿನ ಉದಾರತೆಯು ಕನ್ನಡಕ್ಕೆ ತೊಂದರೆ ಉಂಟುಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಕನ್ನಡ ನಾಡಿನಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬರು ಕನ್ನಡ ಮಾತನಾಡಬೇಕು. ನಾವು ತಮಿಳುನಾಡಿಗೆ ಹೋಗಿ ತಮಿಳು ಗೊತ್ತಿಲ್ಲದೆ ನಾವು ಬದಕುವುದು ಆಗುತ್ತಾ? ಆದ್ರೆ, ಇಲ್ಲಿ ಮಾತ್ರಾ ಕನ್ನಡ ಗೊತ್ತಿಲ್ಲದೆ ಇದ್ದರೂ ಬದಕಬಹುದು ಹೇಗಿದೆ ನೋಡಿ? ಕರ್ನಾಟಕದವರು ವಿಶಾಲ ಹೃದಯದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ವಾಸ್ತವವಾಗಿ ಕರ್ನಾಟಕ 50ರ ಸಂಭ್ರಮವನ್ನ ಕಳೆದ ವರ್ಷ ಆಚರಣೆ ಮಾಡಬೇಕಾಗಿತ್ತು. ಆದರೆ ಹಿಂದಿನ ಸರ್ಕಾರ ಮಾಡಿಲ್ಲ. ಹೀಗಾಗಿ, ನಾನು ಬಜೆಟ್ ನಲ್ಲಿಯೇ ಕರ್ನಾಟಕ 50ನೇ ವರ್ಷದ ಸಂಭ್ರಮಾಚರಣೆ ಬಗ್ಗೆ ಉಲ್ಲೇಖಿಸಿದ್ದೇನೆ. ಇಡೀ ವರ್ಷ ಈ ಹಬ್ಬ ಆಚರಣೆ ಮಾಡಲಿದ್ದೇವೆ. ಈಗ ಸಿದ್ಧಪಡಿಸಿರುವ ಲಾಂಛನದಲ್ಲಿ ಹೆಸರಾಯಿತು ಕನ್ನಡ ಉಸಿರಾಯಿತು ಕನ್ನಡ ಎಂಬ ಘೋಷಣಾ ವ್ಯಾಕ್ಯ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ನನ್ನ ಅನೇಕ ಜನ ಭೇಟಿ ಮಾಡ್ತಾರೆ. ಅವರು ಅವರವರ ಭಾಷೆಯಲ್ಲಿ ಮಾತಾಡುತ್ತಾರೆ. ನಾನು ಅದಕ್ಕೆ ಕನ್ನಡದಲ್ಲಿ ಮಾತಾಡಯ್ಯ ಎಂದು ಹೇಳುತ್ತೇನೆ. ಇಂಗಿಷ್‌ನ ವ್ಯಾಮೊಹನೋ‌ ಏನೋ ಗೊತ್ತಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT