ತಲಕಾವೇರಿಯಲ್ಲಿ ತೀರ್ಥೋದ್ಭವ 
ರಾಜ್ಯ

ತಲಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ 'ಕಾವೇರಿ'

ಕೊಡವರ ಖ್ಯಾತ ಪವಿತ್ರ ಯಾತ್ರಾ ತಾಣ ತಲಕಾವೇರಿಯಲ್ಲಿ  'ಕಾವೇರಿ' ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ.

ಕೊಡಗು: ಕೊಡವರ ಖ್ಯಾತ ಪವಿತ್ರ ಯಾತ್ರಾ ತಾಣ ತಲಕಾವೇರಿಯಲ್ಲಿ 'ಕಾವೇರಿ' ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ.

ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ. ಈ ಪವಿತ್ರ ಕ್ಷಣವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡಿದ್ದು, ಅರ್ಚಕರು ಭಕ್ತರ ಮೇಲೆ ಕಾವೇರಿ ನೀರನ್ನು ಎರಚಿದ್ದು, ಕಾವೇರಿ ಮಾತೆಯ ಪ್ರೋಕ್ಷಣೆಯಿಂದ ಭಕ್ತರು ಪುನೀತರಾಗಿದ್ದಾರೆ.

ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಜೆ 4 ಗಂಟೆಯಿಂದಲೇ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ಸಿಬ್ಬಂದಿಗಳಿಂದ ವ್ಯವಸ್ಥೆ ಮಾಡಲಾಗಿದೆ.

ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ವಿಸ್ಮಯಕಾರಿ ಕುಂಡಿಕೆ: 
ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ. ಇಲ್ಲಿನ ಪುಟ್ಟ ಕುಂಡಿಕೆಯಲ್ಲಿನ ಕಾವೇರಿ ಜಲವನ್ನು ತೀರ್ಥವೆಂದು ನಂಬಿ ಪೂಜಿಸುವುದಲ್ಲದೆ ಮನೆಗೆ ಕೊಂಡೊಯ್ಯುತ್ತಾರೆ. ಈ ಕುಂಡಿಕೆಯನ್ನು ಭಕ್ತಿ ಭಾವದಿಂದ ಕಾಣುತ್ತಾರೆ. ನಿತ್ಯ ಇಲ್ಲಿ ಪೂಜೆ ನಡೆಯುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT