ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಅಭ್ಯಾಸಕ್ಕೆಂದು ತೆರಳಿ ಅಖಾಡದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ

ದಾವಣಗೆರೆ ಜಿಲ್ಲೆಯ ಅಖಾಡದ ಆವರಣದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಹರಿಹರ ಪಟ್ಟಣದ ನಿವಾಸಿ ಕಾವ್ಯಾ ಪೂಜಾರ್ ಎಂದು ಗುರುತಿಸಲಾಗಿದ್ದು, ಸೋಮವಾರ ಈ ಘಟನೆ ನಡೆದಿದೆ.

ದಾವಣಗೆರೆ: ಜಿಲ್ಲೆಯ ಅಖಾಡದ ಆವರಣದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಹರಿಹರ ಪಟ್ಟಣದ ನಿವಾಸಿ ಕಾವ್ಯಾ ಪೂಜಾರ್ ಎಂದು ಗುರುತಿಸಲಾಗಿದ್ದು, ಸೋಮವಾರ ಈ ಘಟನೆ ನಡೆದಿದೆ.
ಕುಸ್ತಿಯಲ್ಲಿ ಕಾವ್ಯಾ ಹಲವು ಪ್ರಶಸ್ತಿಗಳನ್ನು ಪಡೆದು ಉತ್ತಮ ಹೆಸರು ಗಳಿಸಿದ್ದರು. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾವ್ಯಾ ಧಾರವಾಡದ ಕುಸ್ತಿಪಟುಗಳ ಹಾಸ್ಟೆಲ್‌ನಲ್ಲಿ ವಾಸವಿದ್ದು, ಅಲ್ಲೇ ಓದುತ್ತಿದ್ದಳು. ಎರಡು ದಿನಗಳ ಹಿಂದೆ ಹರಿಹರದ ಮನೆಗೆ ಬಂದಿದ್ದಳು.

ಸಂತ್ರಸ್ತೆ ಸೋಮವಾರ ಬೆಳಗ್ಗೆ ಅಭ್ಯಾಸಕ್ಕಾಗಿ ಅಖಾಡಕ್ಕೆ ತೆರಳಿದ್ದರು. ಆದರೆ, ನಂತರ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹರಿಹರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಸಂತ್ರಸ್ತೆ ಕುಸ್ತಿಪಟುಗಳ ಕುಟುಂಬದಿಂದ ಬಂದವರಾಗಿದ್ದು, ಪ್ರದರ್ಶನ ನೀಡುವಂತೆ ಒತ್ತಡ ಹೇರುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT