ಕರ್ನಾಟಕ ವಿಧಾನಸೌಧ 
ರಾಜ್ಯ

ತೀವ್ರ ಬರ: ಉದ್ಯೋಗ ಖಾತ್ರಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ರಾಜ್ಯ ಮನವಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. 

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. 

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದಕ್ಕೆ ಬಾಕಿ ಹಣವನ್ನು ಶೀಘ್ರವೆ ಬಿಡುಗಡೆ ಮಾಡಬೇಕೆಂದು ಸರ್ಕಾರ ಆಗ್ರಹಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್ ಗೆ ಪತ್ರ ಬರೆದಿದ್ದಾರೆ.

ಆಗಸ್ಟ್ 29 ರಿಂದ 478.46 ಕೋಟಿ ರೂಪಾಯಿ ಮೊತ್ತದ ಎಂಒಆರ್ ಡಿಯ ವೇತನ ಬಿಡುಗಡೆಯಾಗಿಲ್ಲ ಎಂದು ವಂದಿತಾ ಶರ್ಮಾ ಉಲ್ಲೇಖಿಸಿದ್ದಾರೆ. ಕರ್ನಾಟಕದ ಗ್ರಾಮೀಣಾಭಿವೃದ್ಧಿ ಕಮೀಷನರೇಟ್ ಪ್ರಸ್ತುತ ಮತ್ತು ಹಿಂದಿನ ವರ್ಷದ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಬಳಕೆಯ ಪ್ರಮಾಣಪತ್ರಗಳು ಮತ್ತು ವಾರ್ಷಿಕ ಲೆಕ್ಕಪರಿಶೋಧಕ ವಿವರಹಳನ್ನು ಸಲ್ಲಿಸಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಕಾರ್ಯದರ್ಶಿಗಳ ಮಾಹಿತಿಯ ಪ್ರಕಾರ, 236 ತಾಲೂಕುಗಳ ಪೈಕಿ 195 ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ಘೋಷಿಸಲಾಗಿದ್ದು, 34 ತಾಲೂಕುಗಳನ್ನು ಸಾಧಾರಣ ಬರ ಎಂದು ಘೋಷಿಸಿದೆ. ಬರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ಮನ್ರೇಗಾ ಮೇಲೆ ಅವಲಂಬಿತರಾಗಿದ್ದಾರೆ.

"ಗ್ರಾಮೀಣದಿಂದ ನಗರ ಪ್ರದೇಶಗಳಿಗೆ ವಲಸೆ ಹೋಗುವವರ ಸಂಖ್ಯೆಯನ್ನು ಕಡಿಮೆ ಮಾಡುವುದು ಮತ್ತು ಅವರಿರುವ ಪ್ರದೇಶಗಳಲ್ಲೇ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವಂದಿತಾ ಶರ್ಮಾ ತಿಳಿಸಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬದಿಂದಾಗಿ, ಕಾರ್ಮಿಕರ ದೈನಂದಿನ ಅಗತ್ಯತೆಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಅವರ ದೈನಂದಿನ ಅಗತ್ಯತೆಗಳು ಮತ್ತು ಉದ್ಯೋಗಗಳನ್ನು ಅರಸಿ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ವಲಸೆ ಹೋಗಲು ಪ್ರಾರಂಭಿಸಿದ್ದಾರೆ ಎಂದು ವಂದಿತಾ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT