ಸಂಗ್ರಹ ಚಿತ್ರ 
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಮ್ಯಾಜಿಸ್ಟೀರಿಯಲ್‌ ತನಿಖೆಗೆ ರಾಜ್ಯ ಸರ್ಕಾರ ಆದೇಶ, ವರದಿ ಸಲ್ಲಿಕೆಗೆ 3 ತಿಂಗಳ ಗಡುವು

ನಗರದ ಅತ್ತಿಬೆಲೆ ಬಾಲಾಜಿ ಟ್ರೇಡರ್ಸ್‌ ಪಟಾಕಿ ದಾಸ್ತಾನಿನಲ್ಲಿ ಈಚೆಗೆ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್‌ ತನಿಖೆಗೆ ಮಂಗಳವಾರ ಆದೇಶಿಸಿದೆ.

ಬೆಂಗಳೂರು: ನಗರದ ಅತ್ತಿಬೆಲೆ ಬಾಲಾಜಿ ಟ್ರೇಡರ್ಸ್‌ ಪಟಾಕಿ ದಾಸ್ತಾನಿನಲ್ಲಿ ಈಚೆಗೆ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್‌ ತನಿಖೆಗೆ ಮಂಗಳವಾರ ಆದೇಶಿಸಿದೆ.

ಅಕ್ಟೋಬರ್‌ 7ರಂದು ಸಂಭವಿಸದ ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ವಿಚಾರಣಾಧಿಕಾರಿ ಆದೇಶ ಹೊರಡಿಸಿದ ದಿನಾಂಕದಿಂದ ಮೂರು ತಿಂಗಳ ಒಳಗೆ ಮಾಜಿಸ್ಟೀರಿಯಲ್‌ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಉಲ್ಲೇಖಿಸಲಾಗಿದೆ.

ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಬಾಲಾಜಿ ಟ್ರೇಡರ್ಸ್‌, ಪಟಾಕಿ ದಾಸ್ತಾನು ಮಳಿಗೆಗೆ ಸ್ಫೋಟಕ ಕಾಯಿದೆ ಸೆಕ್ಷನ್‌ 6ರ ಅನ್ವಯ ಸ್ಥಳ ತನಿಖೆ ನಡೆಸಿ, ಸೂಕ್ತ ದಾಖಲೆ ಪಡೆದು ನಿಯಮಾನುಸಾರ ಪರವಾನಗಿ ನೀಡಲಾಗಿದೆಯೇ, ಇದರಲ್ಲಿ ಲೋಪ ಉಂಟಾಗಿದ್ದಲ್ಲಿ ಅದರ ವಿವರ, ಲೋಪಕ್ಕೆ ಕಾರಣರಾದವರು, ಅವಘಡ ಆಕಸ್ಮಿಕವೇ ಅಥವಾ ನಿರ್ಲಕ್ಷ್ಯದಿಂದ ಆಗಿದೆಯೇ, ಅವಘಡದಿಂದ ಆಗಿರುವ ನಷ್ಟದ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ವಿಚಾರಣಾಧಿಕಾರಿಗೆ ನಿರ್ದೇಶಿಸಲಾಗಿದೆ.

ಈಚೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಇದರ ಪರಿಶೀಲನೆ ನಡೆಸಿದ್ದ ರಾಜ್ಯ ಸರ್ಕಾರವು ಮ್ಯಾಜಿಸ್ಟೀರಿಯಲ್‌ ತನಿಖೆಗೆ ಆದೇಶಿಸಿದೆ. ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಸಿಐಡಿ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT