ಸಂಗ್ರಹ ಚಿತ್ರ 
ರಾಜ್ಯ

ಕಳ್ಳತನ ಪ್ರಕರಣ: 15 ದಿನಗಳ ಜೈಲು ಶಿಕ್ಷೆ ಪ್ರಶ್ನಿಸಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ ಆರೋಪಿಗೆ 7 ವರ್ಷದ ಶಿಕ್ಷೆ!

ಕಳ್ಳತನ ಪ್ರಕರಣದಲ್ಲಿ 15 ದಿನಗಳ ಜೈಲು ಶಿಕ್ಷೆ ವಿಧಿಸಿದ್ದ ಕೆಳ ನ್ಯಾಯಾಲಯದ ಆದೇಶದ ಪ್ರಶ್ನಿಸಿದ್ದ ಆರೋಪಿಗೆ ಉನ್ನತ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಕಾರವಾರ: ಕಳ್ಳತನ ಪ್ರಕರಣದಲ್ಲಿ 15 ದಿನಗಳ ಜೈಲು ಶಿಕ್ಷೆ ವಿಧಿಸಿದ್ದ ಕೆಳ ನ್ಯಾಯಾಲಯದ ಆದೇಶದ ಪ್ರಶ್ನಿಸಿದ್ದ ಆರೋಪಿಗೆ ಉನ್ನತ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

2017ರಲ್ಲಿ ಶಿರಸಿ ತಾಲೂಕಿನ ಹಳದಹಳ್ಳಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಅಸ್ಗರ್ ಅಲಿ ಖಾಸಿಂ ಸಾಬ್ ಬಂಧಿತನಾಗಿದ್ದ. 2021ರಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು 15 ದಿನಗಳ ಜೈಲು ಶಿಕ್ಷೆ ಹಾಗೂ 500 ರೂ. ದಂಡ ವಿಧಿಸಿತ್ತು.

ಆದರೆ, ಖಾಸಿಂ ಸಾಬ್ ಈ ಆದೇಶ ಪ್ರಶ್ನಿಸಿ  ಜಿಲ್ಲಾ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಸೋಮವಾರ ಆರೋಪಿಗೆ 7 ವರ್ಷ ಶಿಕ್ಷೆ ವಿಧಿಸಿದ್ದು, ರೂ.1000 ದಂಡ ಕಟ್ಟುವಂತೆ ಆದೇಶಿಸಿದೆ.

2017ರ ಜುಲೈ 31ರಂದು ಹಳದಹಳ್ಳಿಯಲ್ಲಿರುವ ಸೀತಾರಾಮ ಪರಮೇಶ್ವರ ಹೆಗಡೆ ಎಂಬುವವರ ಮನೆಗೆ ನುಗ್ಗಿದ್ದ ಆರೋಪಿ ಖಾಸಿಂ ಸಾಬ್, ಮನೆಯಲ್ಲಿದ್ದ ಮೊಬೈಲ್, ಬ್ಯಾಗ್ , ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಿ, ಪರಾರಿಯಾಗಿದ್ದ.

ಪರಮೇಶ್ವರ ಹೆಗಡೆ ನೀಡಿದ ದೂರಿನ ಮೇರೆಗೆ ಶಿರಸಿ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡು ಖಾಸಿಂ ಸಾಬ್‌ನನ್ನು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ