ರಾಜ್ಯ

ಕಾನೂನು ಮಸೂದೆಗಳ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆ: ಕಾನೂನು ಸಚಿವ ಹೆಚ್ ಕೆ ಪಾಟೀಲ್

Sumana Upadhyaya

ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿಯು ನಿನ್ನೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ 2023 ಮಸೂದೆಗಳ ಅಧ್ಯಯನ ವರದಿಯನ್ನು ಸಲ್ಲಿಸಿದೆ.

ಈ ಮಸೂದೆಗಳನ್ನು ಇತ್ತೀಚೆಗೆ ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಅಧಿಕೃತ ಹೇಳಿಕೆಯ ಪ್ರಕಾರ, ವರದಿಯ ಬಗ್ಗೆ ಮಾಹಿತಿ ನೀಡಿದ ನಂತರ, ಸಮಿತಿಯ ಅಭಿಪ್ರಾಯಗಳ ಆಧಾರದ ಮೇಲೆ ಸರ್ಕಾರವು ಈ ಮಸೂದೆಗಳ ಬಗ್ಗೆ ತನ್ನ ಅಭಿಪ್ರಾಯವನ್ನು ಕೇಂದ್ರಕ್ಕೆ ಕಳುಹಿಸುತ್ತದೆ. ಮುಂದಿನ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಷಯ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಸಚಿವ ಪಾಟೀಲ್, ಸಮಿತಿಯು 10 ಸಭೆಗಳನ್ನು ನಡೆಸಿ ವರದಿ ತಯಾರಿಸಿದೆ. ವಿಧೇಯಕಗಳ ಪ್ರತಿಯೊಂದು ವಿಭಾಗವನ್ನು ಅಧ್ಯಯನ ಮತ್ತು ವಿವರವಾಗಿ ಚರ್ಚಿಸಲಾಗಿದೆ ಎಂದು ವಿವರಿಸಿದರು.

ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಪಿ.ಎನ್.ದೇಸಾಯಿ, ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ.ಹಿರೇಮಠ್, ಮಾಜಿ ಡಿಜಿಪಿ ಎನ್.ಎಸ್.ಮೇಘರಿಖ್, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಪ್ರೊ.ಎಸ್.ವಿ.ಜೋಗಾರಾವ್ ಮತ್ತಿತರರು ಸಮಿತಿಯ ಸದಸ್ಯರಾಗಿದ್ದರು.

SCROLL FOR NEXT