ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ 
ರಾಜ್ಯ

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

'ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ರಾಜ್ಯದ ಎಂಟು ಮಂದಿ ಪದಕಗಳನ್ನು ಗೆದ್ದಿದ್ದಾರೆ.' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

'ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ' ಎಂದೂ ಅಭಿಪ್ರಾಯಪಟ್ಟರು.

'ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ. ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು' ಎಂದು ಅವರು ವಿವರಿಸಿದರು.

'ಈಗ ನಮ್ಮ ರಾಜ್ಯದಿಂದ ಎಂಟು ಮಂದಿ ಪದಕ ಪಡೆದಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಒಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ' ಎಂದು ಶುಭ ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT