ವಿಧಾನ ಸೌಧ 
ರಾಜ್ಯ

ವಿಧಾನ ಸೌಧ-ವಿಕಾಸ ಸೌಧಗಳಲ್ಲಿ ರಾಸಾಯನಿಕ ಮಿಶ್ರಿತ ಅರಶಿನ-ಕುಂಕುಮ ಬಳಕೆ ನಿಷೇಧ ಹಿಂದಿನಿಂದಲೂ ಇದೆ: ಸಿಎಂ ಸ್ಪಷ್ಟನೆ

ಸಾಂಪ್ರದಾಯಿಕ ಪೂಜೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧ, ವಿಕಾಸ ಸೌಧ ಕಟ್ಟಡಗಳ ಒಳಗೆ ನೆಲಹಾಸುಗಳಿಗೆ ರಂಗೋಲಿಗಳಿಗೆ ರಾಸಾಯನಿಕ ಮಿಶ್ರಿತ ಬಣ್ಣ, ಅರಶಿನ-ಕುಂಕುಮ, ಸುಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಬೆಂಗಳೂರು: ಸಾಂಪ್ರದಾಯಿಕ ಪೂಜೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧ, ವಿಕಾಸ ಸೌಧ ಕಟ್ಟಡಗಳ ಒಳಗೆ ನೆಲಹಾಸುಗಳಿಗೆ ರಂಗೋಲಿಗಳಿಗೆ ರಾಸಾಯನಿಕ ಮಿಶ್ರಿತ ಬಣ್ಣ, ಅರಶಿನ-ಕುಂಕುಮ, ಸುಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಕಾಂಗ್ರೆಸ್ ಸರ್ಕಾರ ವಿಧಾನ ಸೌಧ-ವಿಕಾಸ ಸೌಧಗಳಲ್ಲಿ ಹಿಂದೂಗಳ ಸಾಂಪ್ರದಾಯಿಕ ಆಚರಣೆಯಾದ ಅರಶಿನ-ಕುಂಕುಮ ಬಳಕೆಯನ್ನು ನಿಷೇಧಿಸಿದೆ ಎಂದು ವ್ಯಾಪಕ ಸುದ್ದಿಯಾಗಿ ಟೀಕೆ ಕೂಡ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಈ ಹಿಂದಿನ ಬಿಜೆಪಿ ಸರ್ಕಾರವೇ ಆದೇಶ ಹೊರಡಿಸಿತ್ತು, ನಾವು ಹೊಸದಾಗಿ ಹೊರಡಿಸಿರುವ ಆದೇಶವಲ್ಲ. ರಾಸಾಯನಿಕಯುಕ್ತ ಬಣ್ಣಗಳು ಪಾರಂಪರಿಕ ಕಟ್ಟಡಗಳ ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಮುಂದುವರಿಸುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT