ಸಂಸದ ತೇಜಸ್ವಿ ಸೂರ್ಯ 
ರಾಜ್ಯ

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು: ನವರಾತ್ರಿಯ ಆಯುಧ ಪೂಜೆ ಸಮಯದಲ್ಲಿ ರಾಸಾಯನಿಕಯುಕ್ತ ಬಣ್ಣ, ಅರಶಿನ-ಕುಂಕುಮವನ್ನು ಬಳಸುವುದಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಈ ಬಗ್ಗೆ ಸಾರ್ವಜನಿಕ ವಲಯದಿಂದ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಹೊಸ ಆದೇಶವೇನಲ್ಲ, ಹಿಂದಿನ ಬಿಜೆಪಿ ಸರ್ಕಾರವೇ ಆದೇಶ ಹೊರಡಿಸಿದ್ದು ಮತ್ತು ಯಾವ ಕಾರಣಕ್ಕೆ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಚರ್ಚೆಯಾಗುತ್ತಿರುವ ಮತ್ತೊಂದು ವಿಷಯ ತಮಿಳು ನಾಡಿನ ಡಿಎಂಕೆ ಸರ್ಕಾರ ಕೂಡ ಆಯುಧ ಪೂಜೆ ಸಮಯದಲ್ಲಿ ಇಂತಹದ್ದೇ ಆದೇಶ ಹೊರಡಿಸಿದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ವಿರುದ್ಧವಾಗಿ ಸೆಣಸಾಡುತ್ತಿರುವ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಮತ್ತು ಡಿಎಂಕೆ ಇಂತಹ ಆದೇಶ ಹೊರಡಿಸಿರುವುದರಲ್ಲಿ ಯಾವುದೇ ಅಚ್ಚರಿಯಿಲ್ಲ ಎನ್ನುತ್ತಾರೆ ಬೆಂಗಳೂರು ದಕ್ಷಿಣ ಕೇಂದ್ರದ ಸಂಸದ ತೇಜಸ್ವಿ ಸೂರ್ಯ.

ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ. ಈ ಹಿಂದೆ ಹಲವಾರು ಉದಾಹರಣೆಗಳು ಅವರ ರಾಜಕೀಯದ ಬಹಿರಂಗ ಹಿಂದೂ ವಿರೋಧಿ ಸ್ವಭಾವವನ್ನು ಬಹಿರಂಗಪಡಿಸುತ್ತವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಇಂಡಿಯಾ ಮೈತ್ರಿಯಲ್ಲಿ ಪಕ್ಷಗಳ ನಡುವೆ ಭಿನ್ನಾಭಿಪ್ರಾಯವಿರಬಹುದು, ಆದರೆ ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಅವರು ಒಂದು ಎಂದು ಪ್ರತಿಪಾದಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರೂ, ಆಯುಧ ಪೂಜೆಯ ವೇಳೆ ದೇವರ ಮೂರ್ತಿ ಅಥವಾ ವಿಗ್ರಹಗಳ ಬಳಕೆಯನ್ನು ನಿಷೇಧಿಸುವ ಅದರ ಮೈತ್ರಿ ಪಾಲುದಾರ ಡಿಎಂಕೆ ಸರ್ಕಾರ ಸುತ್ತೋಲೆಯನ್ನು ಹಿಂತೆಗೆದುಕೊಂಡಿಲ್ಲ ಎಂದು ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT