ರಾಷ್ಟ್ರಪತಿ ದ್ರೌಪದಿ ಮುರ್ಮು 
ರಾಜ್ಯ

ಅಕ್ಟೋಬರ್ 26 ರಂದು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.

ಸುವರ್ಣ ಮಹೋತ್ಸವದ ಅಂಗವಾಗಿ ಐಐಎಂ ಬೆಂಗಳೂರು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಮೊದಲ ದಿನ(ಅಕ್ಟೋಬರ್ 26) ಐಐಎಂಬಿ ಆಡಿಟೋರಿಯಂನಲ್ಲಿ ಸಂಜೆ 4 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ನಂತರ ಐಐಎಂಬಿ ಕ್ಯಾಂಪಸ್‌ನಲ್ಲಿ ಪುಸ್ತಕ ಬಿಡುಗಡೆ ಹಾಗೂ ಚಲನಚಿತ್ರ ಪ್ರದರ್ಶನ ನಡೆಯಲಿದೆ.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಐಐಎಂ ಬೆಂಗಳೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಮತ್ತು ಐಐಎಂ ಬೆಂಗಳೂರು ನಿರ್ದೇಶಕ ಪ್ರೊ ರಿಷಿಕೇಶ ಟಿ ಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT