ಡಿ.ಕೆ ಶಿವಕುಮಾರ್ 
ರಾಜ್ಯ

ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಉತ್ತರ ಕೊಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರ ಷಡ್ಯಂತ್ರ ಏನೇ ಇರಬಹುದು, ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌.

ಬೆಂಗಳೂರು: "ಬಿಜೆಪಿಯವರ ಷಡ್ಯಂತ್ರ ಏನೇ ಇರಬಹುದು, ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌.

ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ಪ್ರತಿಕ್ರಿಯೆ ನೀಡಿದರು.

"ಶೇ 90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ ಕುಟುಂಬದವರು ನನ್ನ ಆಸ್ತಿ ಯಾವುದು, ನನ್ನ ಹೆಂಡತಿಯ ಆಸ್ತಿ ಯಾವುದು ಎಂದು ಹೇಳಬೇಕು. ನನ್ನನ್ನೇ ಕರೆಸದೆ, ಕೇಳದೆ ಅದು ಹೇಗೆ ಶೇಕಡಾ 90 ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ" ಎಂದರು.

"ನಾವು ನ್ಯಾಯಾಲಯಕ್ಕೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿ ಇಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೆವು. ರಾಜಕೀಯ ಉದ್ದೇಶದಿಂದ ಯಡಿಯೂರಪ್ಪ ಅವರ ಸರ್ಕಾರ ಇದ್ದ ವೇಳೆ ತನಿಖೆಗೆ ಆದೇಶ ನೀಡಿದ್ದರು" ಎಂದು ಹೇಳಿದರು. 

"ನನಗೆ ನ್ಯಾಯಲಯದ ಬಗ್ಗೆ ಗೌರವ, ನಂಬಿಕೆಯಿದೆ. ಅಗತ್ಯ ಸಂದರ್ಭದಲ್ಲಿ ಸೂಕ್ತ ಉತ್ತರ ಕೊಡುತ್ತೇನೆ. ಏನೇ ಪ್ರೇರಣೆ ಇರಬಹುದು, ಆದರೆ ನಾನು ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!