ಕಲಬುರಗಿ/ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತನೋರ್ವ ತಮ್ಮ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಬಿಜೆಪಿ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ: ಆಡಿಯೋ ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಈಗಾಗಲೇ ನಾನು ಮಾಧ್ಯಮದವರಿಗೆ ಈ ಬಗ್ಗೆ ಹೇಳಿದ್ದೇನೆ. ಆ ವ್ಯಕ್ತಿ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮುಖವನ್ನು ನೋಡುತ್ತಿರುವುದು ಇದೇ ಮೊದಲ ಬಾರಿಗೆ. ನನಗೂ ಅದಕ್ಕೂ ಸಂಬಂಧ ಇಲ್ಲ'' ಎಂದರು.
ಸುಖಾ ಸುಮ್ಮನೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನನಗೆ ಗೊತ್ತಿಲ್ಲ. ಯಾಕೆ ನನ್ನ ಹೆಸರು ಹೇಳಿದ ಎನ್ನುವುದೂ ಗೊತ್ತಿಲ್ಲ. ಪೊಲೀಸ್ ತನಿಖೆಯಲ್ಲಿ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ತಿಳಿಸಿದರು.