ಶಿವಕುಮಾರ್ 
ರಾಜ್ಯ

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಾಲ ತೀರಿಸಲಾಗದೆ ಸಾವಿಗೆ ಶರಣು; ಪತ್ನಿಯಿಂದ ದೂರು ದಾಖಲು

ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್​ ಕಿರುಕುಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದರು. ಆದ್ರೆ, ಇದೀಗ ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.

ಕಲಬುರಗಿ: ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ  ಬಿಗ್ ಟ್ವಿಸ್ಟ್ ಸಿಕ್ಕಿದೆ.

ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್​ ಕಿರುಕುಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದರು. ಆದ್ರೆ, ಇದೀಗ ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತಃ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಪತಿ ಹನ್ನೆರಡು ಲಕ್ಷ ಸಾಲ ಮಾಡಿಕೊಂಡಿದ್ದ. ಸಾಲದ ಚಿಂತೆಯಲ್ಲಿ ಮದ್ಯ ಸೇವಿಸುತ್ತಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆಯೂ ಅನುಮಾನ ಇಲ್ಲ ಎಂದು ಮಲ್ಲಮ್ಮ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ತ ರಾತ್ರಿ ಮಲ್ಲಮ್ಮ ದೂರು ದಾಖಲಿಸಿದ್ದಾರೆ. ಸದ್ಯ ದೂರು ಸ್ವೀಕರಿಸಿರುವ ಪೊಲೀಸರು ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೋಬರ್ 18ರಂದು ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ನನ್ನ ಸಾವಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಕಾಂಗ್ರೆಸ್ ನಾಯಕರೇ ಕಾರಣ ‌ಎಂದು ಹೇಳಿರೋ ಆಡಿಯೋ ವೈರಲ್ ಆಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT