ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಲುಗಡೆಗೆ ಅವಕಾಶ: ಪಾದಚಾರಿ, ಕಾರ್ಯಕರ್ತರ ವಿರೋಧ

Manjula VN

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಸಮಿತಿ ಕೈಗೊಂಡ ನಿರ್ಧಾರದ ಕುರಿತು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಕ್ಟೋರಿಯಾ ಪ್ರತಿಮೆಯಿಂದ ಕೆಎಸ್‌ಎಲ್‌ಟಿಎ ನಡುವಿನ ರಸ್ತೆಯ ಒಂದು ಬದಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನ್ಯಾಯಾಲಯಕ್ಕೆ ಭೇಟಿ ನೀಡುವವರ ವಾಹನಗಳ ನಿಲುಗಡೆಗೆ ಅನುಮತಿ ನೀಡಲು ಸಮಿತಿಯು ನಿರ್ಧಾರ ಕೈಗೊಂಡಿದೆ.

ಸಮಿತಿ ನಿರ್ಧಾರ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆಗೆ ಪತ್ರ ಬರೆದಿರುವ ರಾಜ್ಯ ಸರ್ಕಾರ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚಿಸಿದೆ.

ಸರ್ಕಾರದಿಂದ ಪತ್ರ ಬಂದಿದ್ದು, ಎಲ್ಲ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಆದರೆ, ಈ ವರೆಗೂ ಯಾವುದೇ ನಿರ್ಧಾರಗಳನ್ನೂ ಕೈಗೊಂಡಿಲ್ಲ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಬ್ಬನ್ ಪಾರ್ಕ್ ನಲ್ಲಿ ಈಗಾಗಲೇ ಹಲವು ವಾಣಿಜ್ಯ ಪ್ರದೇಶಗಳಿವೆ. ಇದೀಗ ಮತ್ತೊಮ್ಮೆ ಪಾರ್ಕಿಂಗ್'ಗೆ ಅವಕಾಶ ನೀಡುವುದರಿಂದ ಅವ್ಯವಸ್ಥೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

SCROLL FOR NEXT