ಕಾರಿನಿಂದ ಹಣ ಎಗರಿಸುತ್ತಿರುವ ಕಳ್ಳರ ಚಿತ್ರ 
ರಾಜ್ಯ

ಬೆಂಗಳೂರು: ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು 13 ಲಕ್ಷ ರೂ. ಎಗರಿಸಿದ ಕಳ್ಳರು!

ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ನಿಂತಿದ್ದ ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಸಜಾರ್ಪುರ ಬಳಿ ನಡೆದಿದೆ. ಸೋಂಪುರದ ಸಬ್‌ ರಿಜಿಸ್ಟ್ರಾರ್‌ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ ಕಳ್ಳರು, ಹಣ ಕಳ್ಳತನ ಮಾಡುವ ದೃಶ್ಯಗಳು ಪಕ್ಕದ ಮಳಿಗೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಬೆಂಗಳೂರು: ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ನಿಂತಿದ್ದ ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಸಜಾರ್ಪುರ ಬಳಿ ನಡೆದಿದೆ. ಸೋಂಪುರದ ಸಬ್‌ ರಿಜಿಸ್ಟ್ರಾರ್‌ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ ಕಳ್ಳರು, ಹಣ ಕಳ್ಳತನ ಮಾಡುವ ದೃಶ್ಯಗಳು ಪಕ್ಕದ ಮಳಿಗೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ವಿಡಿಯೋದಲ್ಲಿ ಒಬ್ಬ ಬೈಕ್ ನಲ್ಲಿ ಕುಳಿತಿದ್ದರೆ ಮತ್ತೋರ್ವ ಯಾರಿಗೂ ಅನುಮಾನ ಬಾರದಂತೆ ನಿಂತುಕೊಂಡು ಕಾರಿನ ಗಾಜನ್ನು ಒಡೆದು ಹಾಕಿದ್ದು, ನಂತರ, ಕಾರಿನೊಳಗಿದ್ದ ಹಣದ ಬ್ಯಾಗ್‌ ಎತ್ತಿಕೊಳ್ಳುತ್ತಾನೆ. ನಂತರ ಅಲ್ಲಿ ಪಕ್ಕದಲ್ಲಿಯೇ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ನಿಂತಿದ್ದ ತನ್ನ ಸಹಚರನ ಬೈಕ್‌ ಹತ್ತಿಕೊಂಡು ಅಲ್ಲಿಂದ ಪರಾರಿ ಆಗಿದ್ದಾರೆ. ಶುಕ್ರವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಕಾರಿನ ಮಾಲೀಕರು ಬಂದು ನೋಡಿದಾಗ ಕಾರಿನ ಗಾಜು ಒಡೆದಿದ್ದು, ಹಣ ಬ್ಯಾಗ್‌ ಇಲ್ಲದಿರುವುದನ್ನು ಕಂಡು ಗಾಬರಿಯಾಗಿದ್ದು, ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!