ರಾಜ್ಯ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ದ ಅವಹೇಳನಕಾರಿ ಪೋಸ್ಟ್; ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

Ramyashree GN

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಜೆಪಿಯ ಕರ್ನಾಟಕ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಪೊಲೀಸರಿಗೆ ದೂರು ನೀಡಿದೆ.

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ 94 ಕೋಟಿ ರೂ. ನಗದು ಮತ್ತು 8 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕಾಂಗ್ರೆಸ್‌ಗೆ ಸೇರಿದ್ದು ಎಂದು ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಬಿಂಬಿಸಿದೆ ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹೇಳಿದ್ದಾರೆ.

ಬಿಜೆಪಿಯವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಚಿತ್ರಗಳನ್ನು ತಿರುಚಿ ಕಳಪೆಯಾಗಿ ಬಿಂಬಿಸಿ ಜನರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದು ದೂರಿದ್ದಾರೆ.

ಟ್ವಿಟರ್‌ನಲ್ಲಿನ ಕರ್ನಾಟಕ ಬಿಜೆಪಿ ಘಟಕದ ಮಾನಹಾನಿಕರ ಪೋಸ್ಟ್‌ಗಳನ್ನು ಅನೇಕ ಬಿಜೆಪಿ ನಾಯಕರು ಸಹ ಹಂಚಿಕೊಂಡಿದ್ದಾರೆ ಎಂದು ಮುಕುಂದರಾಜ್ ಆರೋಪಿಸಿದ್ದಾರೆ.

'ಐಟಿ ಇಲಾಖೆಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಾನು ವಶಪಡಿಸಿಕೊಂಡ ನಗದು ಸಚಿವರು ಅಥವಾ ಯಾವುದೇ ನಿರ್ದಿಷ್ಟ ವ್ಯಕ್ತಿಗೆ ಸೇರಿದ್ದು ಎಂದು ಎಲ್ಲಿಯೂ ಹೇಳಿಲ್ಲ. ತನಿಖೆ ಪೂರ್ಣಗೊಳ್ಳುವ ಮೊದಲೇ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹರಡಲು ಪ್ರಾರಂಭಿಸಿದೆ' ಎಂದು ಕಾಂಗ್ರೆಸ್ ನಾಯಕ ತಮ್ಮ ದೂರಿನಲ್ಲಿ ಹೇಳಿದ್ದಾರೆ.

SCROLL FOR NEXT