ಪೊಲೀಸ್ ಅಧಿಕಾರಿಯೊಂದಿಗೆ ಮಾತಿನ ಚಕಮಕಿ ನಡೆಯುತ್ತಿರುವ ಪಾಕ್ ಕ್ರಿಕೆಟ್ ಪ್ರೇಮಿ. 
ರಾಜ್ಯ

ಐಸಿಸಿ ವಿಶ್ವಕಪ್ 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ, ಬಾಯ್ಮುಚ್ಚಿಸಿದ ಪೊಲೀಸರು!

ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗೆ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗೆ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಾಕಿಸ್ತಾನದ ಜೆರ್ಸಿ ಧರಿಸಿ ಪಂದ್ಯ ವೀಕ್ಷಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಪ್ರೇಮಿ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಈ ವೇಳೆ ಪೊಲೀಸ್ ಅಧಿಕಾರಿ ಆತನ ಬಳಿ ಬಂದು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗದಂತೆ ಸೂಚಿಸಿದ್ದಾರೆ. ಈ ವೇಳೆ ಅಧಿಕಾರಿಯೊಂದಿಗೆ ವ್ಯಕ್ತಿ ಮಾತಿನ ಚಕಮಕಿ ನಡೆಸಿದ್ದಾನೆ.

ನಾನು ಪಾಕಿಸ್ತಾನ ಕ್ರಿಕೆಟ್ ತಂಡದ ಅಭಿಮಾನಿ. ನಮ್ಮ ತಂಡದ ಪರವಾಗಿ ಏಕೆ ಘೋಷಣೆ ಕೂಗಬಾರದು? ಭಾರತ್ ಜಿಂದಾಬಾದ್ ಎಂದು ಘೋಷಣೆ ಕೂಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾನೆ.

ಇದಕ್ಕೆ ಪೊಲೀಸ್ ಅಧಿಕಾರಿ ಭಾರತದ ಪರ ಘೋಷಣೆ ಕೂಗುವುದಕ್ಕೆ ಸಮಸ್ಯೆಯಿಲ್ಲ. ಪಾಕಿಸ್ತಾನ ಪರ ಘೋಷಣೆ ಕೂಗಬೇಡಿ ಎಂದು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಟ್ರೆಂಡಿಂಗ್ ನಲ್ಲಿದ್ದು, ಪಾಕಿಸ್ತಾನ ಕ್ರಿಕೆಯ್ ಪ್ರೇಮಿಯ ಪರ ಹಾಗೂ ವಿರುದ್ಧ ಬಿಸಿಬಿಸಿ ಚರ್ಚೆಗಳು ಆರಂಭವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಪೆಟ್ರೋಲ್-ಡೀಸೆಲ್ ಬಳಿಕ CNG ದರವೂ ಹೆಚ್ಚಳ..!

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ

ಹಿಜಾಬ್ ನಿಷೇಧ ಹಿಂಪಡೆದ ಸರ್ಕಾರ: ನ್ಯಾಯಾಂಗಕ್ಕೆ ಮಾಡಿದ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಕರೆಯದ ಕಾರ್ಯಕ್ರಮಕ್ಕೆ ಹೆಂಗಪ್ಪ ಬರಲಿ: ಪಿತೂರಿ ಮಾಡುವುದನ್ನು ಬಿಟ್ಟು ಬೆಳೆಯುವವರನ್ನು ಪ್ರೋತ್ಸಾಹಿಸಿ; ಜೆಸಿ ಮಾಧುಸ್ವಾಮಿ

SCROLL FOR NEXT