ಸಿದ್ದರಾಮಯ್ಯ 
ರಾಜ್ಯ

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲಿನ ಕೇಸು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು ಸೇರಿದಂತೆ ಪಟ್ಟಣ, ನಗರಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಂದೋಲನದ ನೇತೃತ್ವ ವಹಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇವರ ವಿರುದ್ಧ ರಾಮನಗರ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ಎಂಎಲ್ಸಿ ದಿನೇಶ್ ಗೂಳಿಗೌಡ ಅವರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸಂಪುಟ ಉಪಸಮಿತಿ ಮುಂದಿಟ್ಟು ಚರ್ಚೆ ನಡೆಸಿ ನಂತರ ರವಾನಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಸೂಚಿಸಿದ್ದಾರೆ.

ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಕ್ಯಾಬಿನೆಟ್ ಮುಂದೆ ತರುವಂತೆ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

ಚುನಾವಣಾ ಆಯೋಗಕ್ಕೆ ಸಲ್ಲಿಸಿದ 89 ಲಕ್ಷ ದೂರುಗಳು ತಿರಸ್ಕೃತ; ಮತ್ತೆ ಎಸ್‌ಐಆರ್ ನಡೆಸಿ: ಕಾಂಗ್ರೆಸ್ ಆಗ್ರಹ

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

SCROLL FOR NEXT