ಮಡ್ ಪೈಪ್ ಕೆಫೆಯಲ್ಲಿ ಭಾರಿ ಅಗ್ನಿಅವಘಡ 
ರಾಜ್ಯ

ಬೆಂಗಳೂರಿನಲ್ಲಿ ಸರಣಿ ಅಗ್ನಿ ಅವಘಡ ಘಟನೆ ಬಳಿಕ ಎಚ್ಚೆತ್ತ ಪಾಲಿಕೆ: ಸುರಕ್ಷತೆ ಇಲ್ಲದ 12 ಪಬ್, ಬಾರ್'ಗಳಿಗೆ ಬೀಗ!

ನಗರದಲ್ಲಿ ಸಂಭವಿಸಿದ ಸರಣಿ ಅಗ್ನಿ ಅವಘಡ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರಂತೆ ಅಗ್ನಿ ಸುರಕ್ಷತೆ ಇಲ್ಲದ 12 ಪಬ್ ಹಾಗೂ ಬಾರ್ ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ಗಳನ್ನು ಜಾರಿಗೊಳಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಸರಣಿ ಅಗ್ನಿ ಅವಘಡ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರಂತೆ ಅಗ್ನಿ ಸುರಕ್ಷತೆ ಇಲ್ಲದ 12 ಪಬ್ ಹಾಗೂ ಬಾರ್ ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ಗಳನ್ನು ಜಾರಿಗೊಳಿಸಿದ್ದಾರೆ.

ಕಳೆದ ಬುಧವಾರ ಕೋರಮಗಲದ ಫೋರಂ ಮಾಲ್ ಸಮೀಪದ ಕೆಫೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ, ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವಂತೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬಿಬಿಎಂಪಿಯ ಎಲ್ಲಾ ವಲಯದ ಆರೋಗ್ಯಾಧಿಕಾರಿಗಳು ನಗರದ ಪ್ರತಿಯೊಂದು ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗೆ ಭೇಟಿ ನೀಡಿ, ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ನಗರದಲ್ಲಿ ಒಟ್ಟು 232 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಪರಿಶೀಲಿಸಿದ್ದು, ಈ ಪೈಕಿ 86 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಕಂಡ ಬಂದಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಿದ್ದಾರೆ. ಜೊತೆಗೆ 12 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಬಂದ್ ಮಾಡಿಸಿದ್ದಾರೆ.

ಬಿಬಿಎಂಪಿ ಆರೋಗ್ಯ ಇಲಾಖೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಎಎಸ್ ಅವರು ಮಾತನಾಡಿ, ಈ ಕಾರ್ಯಾಚರಣೆಯು ಒಂದು ವಾರಗಳ ಕಾಲ ಮುಂದುವರಿಯಲಿದೆ. ನಗರದ ಎಂಟು ವಲಯಗಳಲ್ಲಿರುವ ಎಲ್ಲಾ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಪರಿಶೀಲಿಸುತ್ತೇವೆ ಮತ್ತು ಲೋಪಗಳು ಕಂಡುಬಂದರೆ ಮತ್ತು ವ್ಯವಹಾರಗಳು ಬಿಬಿಎಂಪಿ ಪರವಾನಗಿ ನಿಯಮಗಳನ್ನು ಅನುಸರಿಸದಿದ್ದರೆ, ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,118 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪರವಾನಗಿ ನೀಡಲಾಗಿದ್ದು, ಶುಕ್ರವಾರ 232 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಇತರೆ ಇನ್ನು ಕೆಲವೇ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT