ರಾಜ್ಯ

ನಕಲಿ ವೋಟರ್ ಐಡಿ ಹಗರಣ: ಪೊಲೀಸರಿಂದ ಆರೋಪಿಗಳ ವಿಚಾರಣೆ

Manjula VN

ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಬೆಂಬಲಿಗ ಮೌನೇಶ್ ಕುಮಾರ್ ಅವರನ್ನು ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನಕಲಿ ಆಧಾರ್ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಡ್ರೈವಿಂಗ್ ಲೈಸೆನ್ಸ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಮುದ್ರಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿ ಬಂದ ಹಿನ್ನೆಲೆಯಲ್ಲಿ ಆರ್‌ಟಿ ನಗರದ ಕನಕನಗರದ ಸುಲ್ತಾನ್ ಪಾಳ್ಯ ಮುಖ್ಯರಸ್ತೆಯಲ್ಲಿರುವ ಮೌನೇಶ್ ಕುಮಾರ್ ಅವರ ಎಂಎಸ್‌ಎಲ್ ಟೆಕ್ನೋ ಸೊಲ್ಯೂಷನ್ಸ್ ಕಚೇರಿಯ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದರು.

ಪ್ರಕರಣ ಸಂಬಂಧ ಮೌನೇಶ್ ಹಾಗೂ ಆತನ ಸಹಚರರಾದ ಭಗತ್ ಹಾಗೂ ರಾಘವೇಂದ್ರ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯಾಗಿರುವ ಮೌನೇಶ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಸಚಿವ ಭೈರತ್ ಸುರೇಶ್ ಅವರೊಂದಿಗಿರುವ ಫೋಟೋಗಳನ್ನು ಹಾಕಿಕೊಂಡಿದ್ದು, ಹೀಗಾಗಿ ಭೈರತಿ ಸುರೇಶ್ ಅವರ ಆಪ್ತನೆಂದು ಹಲವುರು ಟೀಕಿಸುತ್ತಿದ್ದಾರೆ. ಬಿಜೆಪಿ ಕೂಡ ವಾಗ್ದಾಳಿ ನಡೆಸಿದೆ.

ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ಶನಿವಾರ ವಿಚಾರಣೆಗೊಳಸಪಡಿಸಿದರು. ಈ ವೇಳೆ ಆರೋಪಿಗಳಿಂಗ ಕಂಪ್ಯೂಟರ್, ಲ್ಯಾಪ್ ಟಾಪ್, ಫೋನ್ ಗಳನ್ನು ವಶಪಡಿಸಿಕೊಂಡಿದ್ದು, ಮೌನೇಶ್ ಅವರಿಗೆ ನೋಟಿಸ್ ಜಾರಿ ಮಾಡಿ, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

SCROLL FOR NEXT