ಮಾಜಿ ಸಿಎಂ ಬೊಮ್ಮಾಯಿ 
ರಾಜ್ಯ

ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ನಾಳೆ ಆಸ್ಪತ್ರೆಯಿಂದ ಬಿಡುಗಡೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು, ಸ್ವತಃ ದೂರವಾಣಿ ಮೂಲಕ ಕರೆ ಮಾಡಿ, ಬೊಮ್ಮಾಯಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಶೀಘ್ರ ಗುಣಮುಖರಾಗುವಂತೆ ಶುಭ ಕೋರಿದ್ದು, ಆರೋಗ್ಯದ ಕಡೆ ಗಮನ ಕೊಡುವಂತೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಮೋದಿಯವರು ತಮ್ಮ ಆರೋಗ್ಯ ವಿಚಾರಿಸಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆಂದು ಹೇಳಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ ನಡೆಸಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಕೆಲ ಪ್ರಾಥಮಿಕ ಪರೀಕ್ಷೆ ನಡೆಸಲಾಯಿತು, ಈ ವೇಳೆ ಅವರಿಗೆ ಹೃದಯ ಸಂಬಂಧಿ ಕೆಲ ಸಮಸ್ಯೆ ಇರುವ ಅನುಮಾನ ಮೂಡಿತು. ಹೀಗಾಗಿ, ಅವರ ಸಮಗ್ರ ಮತ್ತು ಪರಿಣಿತ ವೈದ್ಯಕೀಯ ಆರೈಕೆಗಾಗಿ, ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್‌ ಸೈನ್ಸ್‌ ಅಧ್ಯಕ್ಷರಾದ ಡಾ. ವಿವೇಕ್‌ ಜವಳಿ ಅವರ ಮೇಲ್ವಿಚಾರಣೆಯಲ್ಲಿ ಅಕ್ಟೋಬರ್‌ 15 ರಂದು ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ಆಂಜಿಯೋಗ್ರಾಮ್ ನಂತರ, ಎಲ್ಲಾ ಮೂರು ಪರಿಧಮನಿಯ ಅಪಧಮನಿಗಳಲ್ಲಿ ತೀವ್ರ ಮತ್ತು ಪ್ರಸರಣ ತಡೆ ಇರುವುದು ಕಂಡು ಬಂತು. ಈ ಲಕ್ಷಣಗಳು ಇದ್ದರೆ ಭವಿಷ್ಯದಲ್ಲಿ ಹೃದಯಾಘಾತ ಸಂಭವನೀಯ ಅಪಾಯವನ್ನು ಉಂಟುಮಾಡುತ್ತವೆ. ಹೀಗಾಗಿ ಅವರಿಗೆ ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಕ್ರಿಯೆಯನ್ನು ನಡೆಸಿ, ಫೈವ್‌ ಗ್ರಾಫ್ಸ್‌ಅನ್ನು ಸಮಸ್ಯೆ ಉಂಟಾಗಿದ್ದ ಪರಿಧಮನಿಯ ಅಪಧಮನಿ ಹೃದಯದ ಬಡಿತದ ಮೇಲೆ ಇರಿಸಲಾಯಿತು. ನಾಳೆ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT