ಸಿಎಂ ಸಿದ್ದರಾಮಯ್ಯ 
ರಾಜ್ಯ

ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಿ; ಅಧಿಕಾರಿಗಳಿಗೆ ಸಿಎಂ ಸೂಚನೆ

ಶಿಕ್ಷಣ ಕ್ಷೇತ್ರದ ಮತ್ತು ಕಲಿಕಾ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಶಿಕ್ಷಕರ ನೇಮಕಾತಿ ಬಹಳ ಮುಖ್ಯವಾಗಿದ್ದು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ಶಿಕ್ಷಣ ಕ್ಷೇತ್ರದ ಮತ್ತು ಕಲಿಕಾ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಶಿಕ್ಷಕರ ನೇಮಕಾತಿ ಬಹಳ ಮುಖ್ಯವಾಗಿದ್ದು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಸಿಎಂ ಗೃಹ ಕಚೇರಿಯಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಿದ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ. ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. 

ವಿವಿಧ ವಿಶ್ವವಿದ್ಯಾನಿಲಯಗಳ ಚಟುವಟಿಕೆಗಳು ವಿವಿಧ ಅವಧಿಗಳಲ್ಲಿ ನಡೆಯದಂತೆ ಏಕರೂಪದ ಕಾರ್ಯಕ್ರಮಗಳ ಕ್ಯಾಲೆಂಡರ್ ಅಗತ್ಯವಿದೆ. ಇದರಿಂದ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಅನುಕೂಲ ಉಂಟಾಗುತ್ತದೆ ಎಂದು ಸಿಎಂ ಸೂಚಿಸಿದರು. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ಪ್ರಯತ್ನ ನಡೆಸುತ್ತಿದೆ ಎಂದು ಅಧಿಕಾರಿಗಳು ಸಿಎಂಗೆ ತಿಳಿಸಿದರು.

ಮುಖ್ಯಮಂತ್ರಿಯವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾದ ಜವಾಹರ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕನ್ನಡ ಅಧ್ಯಯನ ಪೀಠದ ಚಟುವಟಿಕೆಗಳನ್ನು ಪರಿಶೀಲಿಸಿದರು ಮತ್ತು ಅದರ ಚಟುವಟಿಕೆಗಳನ್ನು ಮುಂದುವರಿಸಲು ಹೆಚ್ಚಿನ ಸೂಚನೆಗಳನ್ನು ನೀಡಿದರು.

ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್‌ಗಳನ್ನು ವಿತರಿಸುವುದು ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ವಿತರಣೆ ಕುರಿತಾಗಿಯೂ ಸಭೆಯಲ್ಲಿ ಚರ್ಚೆಯಾಯಿತು. 

ಮೈಸೂರು ಮಹಾರಾಣಿ ಕಲಾ ಕಾಲೇಜು ಹಾಸ್ಟೆಲ್ ಆವರಣದಲ್ಲಿ ಕಲಾ ಮತ್ತು ವಿಜ್ಞಾನ ವಿಭಾಗದ ತಲಾ 1 ಸಾವಿರ ವಿದ್ಯಾರ್ಥಿನಿಯರಿಗೆ ವಸತಿ ಕಲ್ಪಿಸಲು ಅಂದಾಜು 99 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣವನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಇಲಾಖೆಯಿಂದ 47 ಕೋಟಿ ರೂ. ಬಳಕೆಗೆ ಲಭ್ಯವಿದೆ ಎಂದು ಮಾಹಿತಿ ನೀಡಿದ ಸಿಎಂ, ಮುಂದಿನ ವರ್ಷದ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಮೀಸಲಿಡುವಂತೆ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸದ್ಯ ಶಿಥಿಲಾವಸ್ಥೆಯಲ್ಲಿರುವ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ ಮತ್ತು ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಕೋರಿದರು. ದಸರಾ ಸಂದರ್ಭದಲ್ಲಿ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

'ಹೆಚ್ಚಿನ ಮಕ್ಕಳು (ಮಹಾರಾಣಿ ವಿಜ್ಞಾನ ಕಾಲೇಜು, ಮೈಸೂರು) ಬಡ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಅವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್ ಅನ್ನು ನಿರ್ಮಿಸಬೇಕಾಗಿದೆ' ಎಂದು ಅವರು ಹೇಳಿದರು.

ಈ ವಸತಿ ನಿಲಯ ನಿರ್ಮಾಣಕ್ಕೆ ತಮ್ಮ ಹಿಂದಿನ ಅವಧಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಅನುದಾನ ನೀಡುವುದಾಗಿ ಘೋಷಿಸಿದ್ದರು.
ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡುವಂತೆ ಸಿಎಂ ಸೂಚನೆ ನೀಡಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಆರ್ಥಿಕ ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಇತರ ಸಮಸ್ಯೆಗಳನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ಹಾಸ್ಟೆಲ್‌ಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.

ಶೈಕ್ಷಣಿಕ ಮೂಲಸೌಕರ್ಯ ಮತ್ತು ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಕೈಗೊಳ್ಳಬಹುದಾದ ಕ್ರಮಗಳನ್ನು ಗುರುತಿಸಲು ಆರ್ಥಿಕ ಇಲಾಖೆ ಅಧಿಕಾರಿಗಳು ಉನ್ನತ ಶಿಕ್ಷಣ ಮತ್ತು ಶಾಲಾ ಶಿಕ್ಷಣ ಇಲಾಖೆಗಳೊಂದಿಗೆ ನಿಯಮಿತವಾಗಿ ಸಭೆಗಳನ್ನು ನಡೆಸಬೇಕು ಎಂದು ಸೂಚಿಸಿದ ಅವರು, ಈ ಬಗ್ಗೆ ಪ್ರಸ್ತಾವನೆಗಳನ್ನು ಮುಂಚಿತವಾಗಿ ಸಲ್ಲಿಸಬೇಕು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT