ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಸೂರು ದಸರಾ: ಅಂಬಾರಿ ಬಸ್ ನಲ್ಲಿ ಕುಳಿತು, ವಿದ್ಯುತ್ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!

ಮಹಾನವಮಿ ದಿನವಾದ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ದಸರಾ ಪ್ರಯುಕ್ತ ವಿಶೇಷವಾಗಿ ಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದರು.

ಮೈಸೂರು: ಮಹಾನವಮಿ ದಿನವಾದ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ದಸರಾ ಪ್ರಯುಕ್ತ ವಿಶೇಷವಾಗಿ ಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದರು.

ದಸರಾ ಪ್ರಯುಕ್ತ ಕಳೆದ 9 ದಿನಗಳಿಂದ ಸಾಂಸ್ಕೃತಿಕ ನಗರಿ ಬಗೆಬಗೆಯ ವಿದ್ಯುತ್ ದೀಪಾಲಂಕಾರಗಳಿಂದ ಮಿನುಗುತ್ತಿದ್ದು, ಅಂಬಾರಿ ಬಸ್ ನಲ್ಲಿ ಕುಳಿತು ವಿವಿಧೆಡೆ ಸಂಚರಿಸಿದ ಸಿಎಂ ಸಿದ್ದರಾಮಯ್ಯ, ನಗರದ ಸೌಂದರ್ಯವನ್ನು  ಕಣ್ತುಂಬಿಕೊಂಡರು. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ, ಸಚಿವ ಬೈರತಿ ಬಸವರಾಜ ಮತ್ತಿತರರು ಮುಖ್ಯಮಂತ್ರಿಗೆ ಸಾಥ್ ನೀಡಿದರು.ಇದಕ್ಕೂ ಮುನ್ನಾ, ಪಂಜಿನ ಕವಾಯತು ಮೈದಾನದಲ್ಲಿ ಮೈನವಿರೇಳಿಸಿದ ವೈಮಾನಿಕ ಸಾಹಸ ಪ್ರದರ್ಶನವನ್ನು ಮುಖ್ಯಮಂತ್ರಿ ವೀಕ್ಷಿಸಿದರು.

ಜಂಬೂಸವಾರಿಗೆ ಅಂತಿಮ ಸಿದ್ಧತೆ: ಇತಿಹಾಸ ಪ್ರಸಿದ್ಧ ಜಂಬೂ ಸವಾರಿಗೆ ಅಂತಿಮ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಮಂಗಳವಾರ ಮಧ್ಯಾಹ್ನ 1.46 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಕಂಬಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಚಿನ್ನದ ಅಂಬಾರಿಯಲ್ಲಿನ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ  ಮಾಡುವ ಮುಖಾಂತರ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮಧುವಣಗಿತ್ತಿಯಂತೆ  ಸಿಂಗಾರಗೊಂಡಿದ್ದು, ಅರಮನೆ ಆವರಣದಲ್ಲಿ ಗಣ್ಯಾತಿಗಣ್ಯರು ದಸರಾ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸಾಗುವ ರಾಜ ಬೀದಿಗಳು ಸಹ ಪ್ರವಾಸಿಗರು ಜಂಬೂಸವಾರಿ ವೀಕ್ಷಿಸಲು ಬ್ಯಾರಿಕೇಡ್ ಗಳನ್ನು ಹಾಕಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ದಸರಾ ಮಹೋತ್ಸವದ ಜಂಬೂಸವಾರಿ ದಿನದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಅರಮನೆ, ಜಂಬೂ ಸವಾರಿ ಮಾರ್ಗ ಹಾಗೂ ಪಂಜಿನ ಕವಾಯತು ಮೈದಾನದಲ್ಲಿ ಲಕ್ಷಾಂತರ ಮಂದಿ ಸೇರುವುದರಿಂದ ಯಾವುದೇ ಅನಾಹುತವಾಗದಂತೆ ಕಟ್ಟೇಚ್ಚರ ವಹಿಸಿದ್ದಾರೆ. ಆರು ಸಾವಿರ ಮಂದಿ ಪೊಲೀಸರನ್ನು ವಿಜಯ ದಶಮಿ ದಿನದಂದು ಭದ್ರತೆಗೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ರಮೇಶ್ ಬಾನುತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT