ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ಅಪಘಾತ; ಎರಡು ಕಾರುಗಳು ಮುಖಾಮುಖಿ ಡಿಕ್ಕಿ, ಯುವಕ ಸಾವು

ಏರ್‌ಪೋರ್ಟ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೇರಿ, ಪಕ್ಕದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಮೃತಪಟ್ಟಿದ್ದಾನೆ.

ಬೆಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೇರಿ, ಪಕ್ಕದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಮೃತಪಟ್ಟಿದ್ದಾನೆ.

ಭಾನುವಾರ ಬೆಳಗ್ಗೆ 8.15ರ ಸುಮಾರಿಗೆ ಮೃತ ಶೇಕ್ ಅಹ್ಮದ್ ತನ್ನ ಇಬ್ಬರು ಗೆಳೆಯರಾದ ಹುಸೇನ್ ಷರೀಫ್ ಮತ್ತು ಮೊಹಮ್ಮದ್ ಮಜ್ ಜೊತೆಗೆ ಮೊಹಿದ್ ಚಲಾಯಿಸುತ್ತಿದ್ದ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂತಿರುಗುತ್ತಿದ್ದರು.

ಮೊಹಿದ್ ಅಜಾಗರೂಕತೆಯಿಂದ ಕಾಲು ಚಲಾಯಿಸುತ್ತಿದ್ದ ಎನ್ನಲಾಗಿದೆ. ಅವರ ಕಾರು ಕೋಗಿಲು ಮೇಲ್ಸೇತುವೆ ಮೇಲೆ ಬಂದಾಗ ಕಾರು ನಿಯಂತ್ರಣ ಕಳೆದುಕೊಂಡಿದೆ. ಬಳಿಕ ಕಾರು ಮೀಡಿಯನ್‌ಗೆ ಡಿಕ್ಕಿ ಹೊಡೆದು ಡಿವೈಡರ್‌ಗೆ ಮೇಲಿನಿಂದ ಪಕ್ಕದ ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಎದುರಿಗೆ ಬರುತ್ತಿದ್ದ ಕಾರು ಹೆಬ್ಬಾಳದಿಂದ ಹೊರಟು ನಂದಿ ಬೆಟ್ಟದ ಕಡೆಗೆ ಹೋಗುತ್ತಿತ್ತು. ಇದನ್ನು ನರೇಂದ್ರಬಾಬು ಎನ್ನುವವರು ಓಡಿಸುತ್ತಿದ್ದರು. ಅವರ ಪತ್ನಿ ಲಕ್ಷ್ಮಿ, ಅವರ ಸಹೋದ್ಯೋಗಿ ಶೋಭಾ ಮತ್ತು ಶೋಭಾ ಅವರ 17 ವರ್ಷದ ಮಗಳು ಇಂಚರ ಕಾರಿನಲ್ಲಿದ್ದರು.

ಡಿಕ್ಕಿಯ ರಭಸಕ್ಕೆ ಮುಂದಿನ ಸೀಟಿನಲ್ಲಿದ್ದ ಅಹ್ಮದ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಲಕ್ಷ್ಮಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT