ರಾಜ್ಯ

ರಾಯಚೂರು: ಲಿಂಗಸುಗೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು!

Ramyashree GN

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಹಟ್ಟಿ ಗ್ರಾಮದ 2.6 ಕಿಮೀ ಸುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ತಿಳಿಸಿದೆ.

SCROLL FOR NEXT