ಶಮಿ ಪೂಜೆ ನೆರವೇರಿಸುತ್ತಿರುವ ಯದುವೀರ್ ಒಡೆಯರ್ 
ರಾಜ್ಯ

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಬನ್ನಿಮಂಟಪದಲ್ಲಿ ಶಮಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್

ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.

 ಕಳೆದ 9 ದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು. ಇಂದು ವಿಜಯದಶಮಿ ಅಥವಾ ದಸರಾ ನಿಮಿತ್ತ ಮೈಸೂರಿನಲ್ಲಿ ಜಂಬೂಸವಾರಿ ನಡೆಯುತ್ತದೆ. 

ಯದುವೀರ್ ಒಡೆಯರ್ ರಿಂದ ಶಮಿ ಪೂಜೆ: ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬನ್ನಿಮಂಟಪದಲ್ಲಿ ಇಂದು ಮಧ್ಯಾಹ್ನ ಜಂಬೂ ಸವಾರಿಗೆ ಮುನ್ನ ಶಮಿ ಪೂಜೆ ನಡೆಯಿತು. ರಾಜ ಯದುವೀರ್​ ಒಡೆಯರ್​ ಶಮಿ ಪೂಜೆ ನೆರವೇರಿಸಿದರು. ರಾಜ ಪುರೋಹಿತರ ನೇತೃತ್ವದಲ್ಲಿ ಬನ್ನಿಪೂಜೆ ನೆರವೇರಿಸಿದ ಯದುವೀರ್, ಅಲ್ಲಿ ನೆರೆದಿದ್ದವರಿಗೆ ಪೂಜೆಗೆ ಬಳಸಿದ ಹೂಗಳನ್ನು ವಿತರಿಸಿ, ಅರ್ಚಕರಿಗೆ ‘ಕಣಿಕೆ’ ಅರ್ಪಿಸಿ, ವಿಜಯ ಯಾತ್ರೆಯಲ್ಲಿ ಅರಮನೆಗೆ ಮರಳಿದರು.

ಇಂದು ಮಧ್ಯಾಹ್ನ 1.45ಕ್ಕೆ ನಂದಿಧ್ವಜ ಪೂಜೆ ನೆರವೇರಲಿದೆ. ರಾತ್ರಿ ಬನ್ನಿ ಮಂಟಪದಲ್ಲಿ ಪಂಜಿನ ಕವಾಯತು ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಬರಲಿಲ್ಲ, ವಿದ್ಯುತ್ ಕೊರತೆ ಉಂಟಾಯಿತು. ರಾಜ್ಯದಲ್ಲಿ ಈಗಲಾದರೂ ಮಳೆ‌ ಬರಲಿ ಅಂತ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!