ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ರೈತನ ಬಂಧನ 
ರಾಜ್ಯ

ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!

ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು.

ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮೇರೆಗೆ ದಾಳಿ ನಡೆಸಿದ ಪೊಲೀಸ್ ತಂಡ 63.86 ಕೆಜಿ ತೂಕದ 25.54 ಲಕ್ಷ ಮೌಲ್ಯದ 179 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ರೈತನನ್ನು ಬಂಧಿಸಿದ್ದೇವೆ.

ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು

ಜಮೀನಿನಲ್ಲಿ ತೊಗರಿ ಹಾಗೂ ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT