ಸಂಗ್ರಹ ಚಿತ್ರ 
ರಾಜ್ಯ

ಮಡ್‌ಪೈಪ್ ಕೆಫೆ ಅಗ್ನಿ ಅವಘಡ ಪ್ರಕರಣ: ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ, 48 ರೆಸ್ಟೋರೆಂಟ್'ಗಳು ಬಂದ್

ಕೋರಮಂಗಲದ ಹುಕ್ಕಾ ಬಾರ್ ಮಡ್​​ಪೈಪ್ ಕೆಫೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್​, ಬಾರ್​​ ಮತ್ತು ರೆಸ್ಟೋರೆಂಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ...

ಬೆಂಗಳೂರು: ಕೋರಮಂಗಲದ ಹುಕ್ಕಾ ಬಾರ್ ಮಡ್​​ಪೈಪ್ ಕೆಫೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್​, ಬಾರ್​​ ಮತ್ತು ರೆಸ್ಟೋರೆಂಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಂಗಳವಾರ 48 ಹೋಟೆಲ್, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಿಸಿದ್ದಾರೆ.

ಪರವಾನಗಿ ನಿಯಮಗಳನ್ನು ಪಾಲಿಸದಿರುವ ಪಟ್ಟಿಯಲ್ಲಿ ಮಹದೇವಪುರ ಹಾಗೂ ಪೂರ್ವ ವಲಯ ಅಗ್ರಸ್ಥಾನದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಆರೋಗ್ಯ ಇಲಾಖೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಎ.ಎಸ್ ಮಾತನಾಡಿ, ಪಾಲಿಕೆಯ ಎಂಟು ವಲಯಗಳಲ್ಲಿ ಶುಕ್ರವಾರದಿಂದ ಪರಿಶೀಲನೆ ನಡೆಸಲಾತ್ತಿದೆ. ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಕೆಫೆಗಳಲ್ಲಿ, ಅಧಿಕಾರಿಗಳು ಪರವಾನಗಿ ನಿಯಮಗಳನ್ನು ಅನುಸರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ, ಇತರ ಲೋಪಗಳ ಬಗ್ಗೆ ನಿಗಾ ಇಡುತ್ತಿದ್ದು ಅದರಂತೆ ಕ್ರಮ ಕೈಗೊಳ್ಳುತ್ತಿದ್ದಾರೆಂದು ಹೇಳಿದರು.

"ಬಿಬಿಎಂಪಿ ಇದುವರೆಗೆ 600 ಕ್ಕೂ ಹೆಚ್ಚು ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪರಿಶೀಲನೆ ನಡೆಸಿದೆ. ಪರವಾನಗಿ ನಿಯಮಗಳನ್ನು ಅನುಸರಿಸದಿರುವುದು ಮತ್ತು ಇತರ ಲೋಪದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೋಮವಾರದವರೆಗೆ 48 ಹೋಟೆಲ್, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದೆ.

ಇದನ್ನು ಹೊರತುಪಡಿಸಿ, 353 ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ನೋಟಿಸ್ ನಲ್ಲಿ ಆದಷ್ಟು ಬೇಗ ಕಾನೂನು ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದ್ದು, ದಾಖಲೆ ಸಲ್ಲಿಸದಿದ್ದರೆ, ಹೋಟೆಲ್ ಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂರ್ವ ವಲಯದಲ್ಲಿ ಅತಿ ಹೆಚ್ಚು ಉಲ್ಲಂಘನೆಗಳು ಕಂಡು ಬಂದಿದ್ದು 107 ಮಾಲೀಕರಿಗೆ ನೋಟಿಸ್‌ಗಳನ್ನು ನೀಡಲಾಗಿದೆ. 13 ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದೆ. ಇನ್ನು ದಕ್ಷಿಣ ವಲಯದಲ್ಲಿ 59 ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, 8 ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ಬಾರಿ 'ಮೈಸೂರು ದಸರಾ' ಯಶಸ್ವಿ: ಸಮೀಕ್ಷೆ ಬಳಿಕ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ- ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ'...ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ: RSS ಕಾರ್ಯಕ್ರಮಕ್ಕೆ ಹೋಗಲ್ಲ- CJI ಗವಾಯಿ ತಾಯಿ

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

Asia Cup 2025: 'ಪಾಕಿಗಳ ನೋಡಿದ್ರೆ ಅವನ ರಕ್ತ ಕುದಿಯುತ್ತಿತ್ತು'; ಟೀಂ ಇಂಡಿಯಾ 'Hero' ಕೋಚ್ Kapil Dev Pandey ಮಾತು!

SCROLL FOR NEXT