ನಿಖಿಲ್ ಕುಮಾರಸ್ವಾಮಿ 
ರಾಜ್ಯ

ನಾನು ಧರಿಸಿದ್ದ ಹುಲಿ ಉಗುರು ಪೆಂಡೆಂಟ್ ಕೃತಕವಾದದ್ದು: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ನಾನು ಧರಿಸಿದ್ದ ಹುಲಿ ಉಗುರು...

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿದ್ದಾರೆ.

ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನಯ್ ಗುರೂಜಿ, ನಟ ಜಗ್ಗೇಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT