ದರ್ಶನ್-ಜಗ್ಗೇಶ್-ವೆಂಕಟೇಶ್-ವಿನಯ್ ಗುರೂಜಿ 
ರಾಜ್ಯ

ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್, ರಾಕ್‌ಲೈನ್, ವಿನಯ್ ಗುರೂಜಿ, ಧನಂಜಯ ಗುರೂಜಿ ಮನೆಯಲ್ಲಿ ಶೋಧ

ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.

ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು. 

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 

ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!