ರಾಜ್ಯ

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಪ್ರಮಾಣ ವಚನ ಸ್ವೀಕಾರ

Ramyashree GN

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಈ ಮೂಲಕ ಹೈಕೋರ್ಟ್‌ನ ಒಟ್ಟು ನ್ಯಾಯಾಧೀಶರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು ಮಂಜೂರಾದ ನ್ಯಾಯಾಧೀಶರ ಸಂಖ್ಯೆ 62.

ಸದ್ಯ ನ್ಯಾಯಾಲಯ 2ರಲ್ಲಿ ಪ್ರಕರಣಗಳನ್ನು ನಿರ್ವಹಿಸುತ್ತಿರುವ ಹಿರಿಯ ನ್ಯಾಯಮೂರ್ತಿ ಜಿ. ನರೇಂದರ್ ಅವರನ್ನು ಆಂಧ್ರಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಅಕ್ಟೋಬರ್ 27ರಂದು ಅವರು ಇಲ್ಲಿ ಅಂತಿಮ ಸೇವೆ ಸಲ್ಲಿಸಲಿದ್ದಾರೆ.

ನ್ಯಾಯಮೂರ್ತಿ ನರೇಂದರ್ ಅವರ ವರ್ಗಾವಣೆ ಜಾರಿಯಾದಾಗ ಹೈಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ ಮತ್ತೆ 51ಕ್ಕೆ ಇಳಿಯಲಿದೆ. 

ಕೋಲಾರ ಜಿಲ್ಲೆಯ ದೊಡ್ಡಕುರುಬರಹಳ್ಳಿಯ ಅರವಿಂದ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಅವರು 2004 ರಿಂದ 2012 ರವರೆಗೆ ಆದಾಯ ತೆರಿಗೆ ಇಲಾಖೆಯ ವಕೀಲರಾಗಿ ಕೆಲಸ ಮಾಡಿದ್ದಾರೆ.

ಅವರು ಕಸ್ಟಮ್ಸ್ ಮತ್ತು ಜಿಎಸ್‌ಟಿ ಪ್ರಕರಣಗಳ ಹಿರಿಯ ವಕೀಲರಾಗಿ ಹೈಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದರು.

SCROLL FOR NEXT