ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕುರಿಗಳನ್ನು ಬಲಿ ನೀಡುತ್ತಿರುವ ವೀಡಿಯೊವನ್ನು ಅವರು ಪಡೆದಿದ್ದು, ಅದನ್ನು ಸಾಮಾಜಿಕ ಮಾಧ್ಯಮ  ಎಕ್ಸ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ನಂತರ ಅವರು ಸ್ಥಳೀಯ ಪೊಲೀಸರು ಮತ್ತು ಪಶು ಸಂಗೋಪನಾ ಇಲಾಖೆಗೆ ಶೇರ್ ಮಾಡಿದ್ದಾರೆ. 

ಅಧಿಕಾರಿಗಳಿಗೆ ಸುದ್ದಿಮುಟ್ಟಿಸಿದ ನಂತರ ಪೊಲೀಸ್ ತಂಡವೊಂದನ್ನು ಸ್ಥಳಕ್ಕೆ ಕಳುಹಿಸಿ ಬಾಬು, ಮುನಿಕೃಷ್ಣ ಮತ್ತು ಮುನಿರಾಜು ಎಂಬುವರ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960, ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆ, 1959 ಮತ್ತು ಐಪಿಸಿ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ  ಎಂದು ಹರೀಶ್ ಹೇಳಿದರು.

ದಸರಾ ಅಂಗವಾಗಿ ಗ್ರಾಮೋತ್ಸವ ಏರ್ಪಡಿಸಿ ಕುರಿ ಬಲಿ ನೀಡಲಾಗಿದ್ದು, ಮೂವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕಾಡುಗುಡಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಠಾಣೆಗೆ ಬಂದು ಪ್ರಾಥಮಿಕ ತನಿಖೆ ಎದುರಿಸಿದ್ದು, ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?