ಸಂಗ್ರಹ ಚಿತ್ರ 
ರಾಜ್ಯ

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಉತ್ಪಾದಕರಿಗೆ ಅನುಮತಿ ನೀಡಲು ಆದೇಶಿಸಿದ್ದ ತೀರ್ಪಿಗೆ ಹೈಕೋರ್ಟ್ ತಡೆ

ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್‌ಎಸ್‌ಆರ್‌ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಮುಂದಿನ 15 ದಿನಗಳಲ್ಲಿ ಅನುಮತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನ ಏಕಸದಸ್ಯ ಪೀಠ ಮಾಡಿದ್ದ ಆದೇಶವನ್ನು ವಿಭಾಗೀಯ ಪೀಠವು...

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್‌ಎಸ್‌ಆರ್‌ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಮುಂದಿನ 15 ದಿನಗಳಲ್ಲಿ ಅನುಮತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನ ಏಕಸದಸ್ಯ ಪೀಠ ಮಾಡಿದ್ದ ಆದೇಶವನ್ನು ವಿಭಾಗೀಯ ಪೀಠವು ಮುಂದಿನ ವಿಚಾರಣೆವರೆಗೆ ಅಮಾನತಿನಲ್ಲಿಟ್ಟು ಬುಧವಾರ ಆದೇಶಿಸಿದೆ.

2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳು 90 ದಿನಗಳ ಒಳಗಾಗಿ ಹೊಸ ಪರವಾನಗಿ ನೋಂದಣಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ 2023ರ ಆಗಸ್ಟ್ 18ರ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಜಾರಿ ಮಾಡುವುದಕ್ಕೆ 90 ದಿನಗಳ ಕಾಲಮಿತಿ ವಿಸ್ತರಣೆ ಮಾಡಬೇಕು ಎಂದು ಕೋರಿ ಬೆಂಗಳೂರಿನ ಎಸ್ ಗೌರಿಶಂಕರ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಂ ಹುಯಿಲಗೋಳ ಅವರು ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2023ರ ಸೆಪ್ಟಂಬರ್ 20ರಂದು ಏಕಸದಸ್ಯ ಪೀಠವು ಆದೇಶ ಮಾಡಿದ್ದು, ಮುಂದಿನ 15 ದಿನಗಳಲ್ಲಿ ನಂಬರ್ ಫಲಕ ಉತ್ಪಾದಕರನ್ನು ಅಂತಿಮಗೊಳಿಸುವಂತೆ ನಿರ್ದೇಶಿಸಿದೆ. ಆದರೆ, ಈ ಸಂಬಂಧ ಸಂಬಂಧ ಪಟ್ಟ ಪಾಲುದಾರರೊಂದಿಗೆ ನವೆಂಬರ್ ಮೊದಲ ವಾರದಲ್ಲಿ ಸಭೆ ಕರೆಯಲಾಗಿದೆ. ಜೊತೆಗೆ, ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಹೀಗಾಗಿ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕು” ಎಂದು ಕೋರಿದರು.

ಇದನ್ನು ಪುರಸ್ಕರಿಸಿದ ಪೀಠವು ಮುಂದಿನ ವಿಚಾರಣೆವರೆಗೂ ಏಕ ಸದಸ್ಯ ಪೀಠದ ಆದೇಶವನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಪಿಐಎಲ್‌ ಮತ್ತು ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಒಟ್ಟಾಗಿ ವಿಚಾರಣೆ ನಡೆಸಲಾಗುವುದು ಎಂಧು ವಿಚಾರಣೆಯನ್ನು ನವೆಂಬರ್ 22ಕ್ಕೆ ಮುಂದೂಡಿತು.

ಏನಿದು ಪ್ರಕರಣ?
2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳು 90 ದಿನಗಳ ಒಳಗಾಗಿ ಹೊಸ ಪರವಾನಗಿ ನೋಂದಣಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಿಡಿಸಿತ್ತು. ಈ ಅಧಿಸೂಚನೆ ಪ್ರಶ್ನಿಸಿದ್ದ ಭಾರತೀಯ ಅತಿ ಸುರಕ್ಷಿತ ನಂಬರ್ ಫಲಕಗಳ ಉತ್ಪಾದಕರ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿ, ಕೆಲ ಕಂಪೆನಿಗಳಿಗೆ ಮಾತ್ರ ನಂಬರ್‌ ಪ್ಲೇಟ್ ಉತ್ಪಾದನೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಇತರರಿಗೆ ಅವಕಾಶ ನೀಡಿಲ್ಲ. ಹೀಗಾಗಿ ಅಧಿಸೂಚನೆಗೆ ತಡೆ ನೀಡಬೇಕು ಎಂದು ಕೋರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಒಕ್ಕೂಟದ ಮನವಿಯನ್ನು ತಿರಸ್ಕರಿಸಿದ್ದು, ನಂಬರ್ ಫಲಕ ಉತ್ಪಾದನೆ ಮಾಡುವುದಕ್ಕೆ ಪರವಾನಿಗೆ ಹೊಂದಿರುವ ಎಲ್ಲ ಕಂಪೆನಿಗಳನ್ನು ಪರಿಗಣಿಸಿ ನಿಯಮಗಳ ಪ್ರಕಾರ ಮುಂದಿನ 15 ದಿನಗಳಲ್ಲಿ ಉತ್ಪಾದಕರನ್ನು ಅಂತಿಮ ಗೊಳಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿತ್ತು. ಈ ಆದೇಶವನ್ನು ದ್ವಿಸದಸ್ಯ ಪೀಠ ಅಮಾನತ್ತಿನಲ್ಲಿಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT