ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಉನ್ನತ ಮಟ್ಟದ ಸಭೆ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಹೆಚ್ಚಿನ ಅರ್ಹತೆ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಮತ್ತು  ಪ್ರಶಸ್ತಿ ಪುರಸ್ಕೃತರ ಆಯ್ಕೆಯಲ್ಲಿ ಪ್ರಾದೇಶಿಕ ನ್ಯಾಯವನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.  

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಹೆಚ್ಚಿನ ಅರ್ಹತೆ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಮತ್ತು  ಪ್ರಶಸ್ತಿ ಪುರಸ್ಕೃತರ ಆಯ್ಕೆಯಲ್ಲಿ ಪ್ರಾದೇಶಿಕ ನ್ಯಾಯವನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.  ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವಾಗ ಎಲ್ಲ ಜಾತಿ, ಧರ್ಮ, ಲಿಂಗದ ಪ್ರಾತಿನಿಧ್ಯ ನೀಡಬೇಕು ಎಂದರು. 

ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಕೆಲಸ ಮಾಡಿದ ಸಂಸ್ಥೆಗಳಿಗೆ  10 ಪ್ರಶಸ್ತಿ ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು. ಈ ವರ್ಷ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಬೇಕಿದ್ದು, ರಾಜ್ಯದ ಪರವಾಗಿ ಕೆಲಸ ಮಾಡಿದ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಅಧಿಕವಾಗಿದ್ದರಿಂದ ಕರ್ನಾಟಕ ಏಕೀಕರಣದ ವರ್ಷಗಳಷ್ಟು ಪ್ರಶಸ್ತಿಗಳನ್ನು ನೀಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯು ರಾಜ್ಯದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ ಮತ್ತು ಇದನ್ನು ಕರ್ನಾಟಕ ರಚನೆಯ ದಿನವಾದ ನವೆಂಬರ್ 1 ರಂದು ನೀಡಲಾಗುತ್ತದೆ.

ಕಲೆ, ಸಾಹಿತ್ಯ, ವಿಜ್ಞಾನ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಾರ್ವಜನಿಕ ವ್ಯವಹಾರಗಳು ಮತ್ತು ಸಮಾಜ ಸೇವೆಯಂತಹ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ ನಾಗರಿಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.2022 ರಲ್ಲಿ  ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್, ಕನ್ನಡ ನಟರಾದ ವಿಂಗ್ ಕಮಾಂಡರ್ ಎಚ್.ಜಿ ದತ್ತಾತ್ರೇಯ (ನಿವೃತ್ತ), ಅವಿನಾಶ್ ಮತ್ತು ಸಿಹಿ ಕಹಿ ಚಂದ್ರು, ಬರಹಗಾರರಾದ ಎ.ಆರ್. ಮಿತ್ರ ಮತ್ತು ಕೃಷ್ಣೇಗೌಡ ಮತ್ತಿತರರು ಪ್ರಶಸ್ತಿಯನ್ನು ಪಡೆದ ಪ್ರಮುಖರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT