ಚಿರತೆ ಸಾಂದರ್ಭಿಕ ಚಿತ್ರ 
ರಾಜ್ಯ

ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ!

ಬೆಂಗಳೂರಿನ ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿತ್ತು.

ಬೆಂಗಳೂರು: ಬೆಂಗಳೂರಿನ ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಅರಣ್ಯಾಧಿಕಾರಿಗಳು ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ್ದು, ಈ ಸುದ್ದಿಯ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. 

ಚಿರತೆ ಕಾಣಿಸಿಕೊಂಡಿದೆ ಎಂಬ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದಾರೆ, ಅಗತ್ಯವಿದ್ದಲ್ಲಿ ಬೋನ್ ಇಡಲಾಗುವುದು ಎಂದು ತಿಳಿಸಿದ್ದಾರೆ.
 
ಅಲೆದಾಡುತ್ತಾ ಇಲ್ಲಿಗೆ ಬಂದಿರಬಹುದು ಅಂತೆಯೇ ವಾಪಸ್ ಹೋಗಬಹುದು, ಚಿರತೆಗಳು ಮಾನವ ವಾಸ ಸ್ಥಾನಕ್ಕೆ ಹೊಂದಿಕೊಳ್ಳುತ್ತವೆ ಇದರಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ಲಿಂಗರಾಜು ತಿಳಿಸಿದ್ದಾರೆ.

ಸಿಗ್ನಲ್ ಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಸಿಸಿಟಿವಿ ಫುಟೇಜ್ ಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅರಣ್ಯ ಅಧಿಕಾರಿಗಳು ಈ ಪ್ರದೇಶದಲ್ಲಿ ಗಸ್ತು ತಿರುಗಲು ಪ್ರಾರಂಭಿಸುತ್ತಿದ್ದಂತೆ, ನಾಗರಿಕರು ಗಾಬರಿಯಾಗದಂತೆ ಮತ್ತು ವದಂತಿಗಳನ್ನು ಹರಡದಂತೆ ವಿನಂತಿಸಿದ್ದಾರೆ. ರಾತ್ರಿಯಲ್ಲಿ ಏಕಾಂಗಿಯಾಗಿ ಅಲೆದಾಡದಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆಯೂ ಕೋರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!