ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ
ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್ಗೆ ಮೃತಪಟ್ಟಿದ್ದಾರೆ.
ಬೆಂಗಳೂರು: ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್ಗೆ ಮೃತಪಟ್ಟಿದ್ದಾರೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವೀಣಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಇದಕ್ಕೂ ಮುನ್ನ ಬೆಂಗಳೂರಿನ ವಿಜಯನಗರದಲ್ಲಿ ಬೈಕ್ ಸವಾರ ಕುಮಾರ್ ಎಂಬುವವರು ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದು ಬಸ್ ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರದ ಗೋವಿಂದರಾಜನಗರ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟರು.
ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.