ರಾಜ್ಯ

ಬರ ಪರಿಹಾರ ಬಿಡುಗಡೆ; ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಕಿಡಿ 

Ramyashree GN

ಮಂಗಳೂರು: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರದಿಂದ ಬರ ಪರಿಹಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದೆ. ರಾಜ್ಯವೂ ಎರಡು ಮನವಿಗಳನ್ನು ಸಲ್ಲಿಸಿದೆ. ಸದ್ಯ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಸುಮಾರು 30 ಸಾವಿರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಕೇಂದ್ರದಿಂದ ಸುಮಾರು 17,900 ಕೋಟಿ ರೂ. ಪರಿಹಾರ ಕೇಳಲಾಗಿದೆ. ಆದರೆ, ಇದುವರೆಗೂ ಕೇಂದ್ರದಿಂದ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ' ಎಂದರು.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿ 50 ಕೋಟಿ ನೀಡುತ್ತಿರುವ ಬಗ್ಗೆ ಅಥವಾ ಸಚಿವ ಸ್ಥಾನದ ಆಮಿಷವೊಡ್ಡುತ್ತಿರುವ ಬಗ್ಗೆ ಮಾಹಿತಿ ಇದೆ ಎಂಬ ಮಾಹಿತಿ ಇದೆ ಎಂದರು.

ಗೃಹ ಸಚಿವ ಪರಮೇಶ್ವರ್ ಅವರೊಂದಿಗಿನ ರಹಸ್ಯ ಸಭೆಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಗೃಹ ಸಚಿವರ ಆಹ್ವಾನದ ಮೇರೆಗೆ ಅವರ ಮನೆಗೆ ಊಟಕ್ಕೆ ಹೋಗಿದ್ದೆ ಹೊರತು ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಹೇಳಿದರು.

ಸಿಎಂ ಅನ್ನು ಕಲೆಕ್ಷನ್ ಮಾಸ್ಟರ್ ಎಂದು ಕರೆದ ಸಾಮಾಜಿಕ ಮಾಧ್ಯಮದಲ್ಲಿನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸಿಎಂ, 'ಅವರು ರಾಜಕೀಯದಲ್ಲಿ ಬಚ್ಚಾ. ಅವರು ಬಿಜೆಪಿ ಸರ್ಕಾರ ಮತ್ತು ಅವರ ಮುಖ್ಯಮಂತ್ರಿಯನ್ನು (ಕಲೆಕ್ಷನ್ ಮಾಸ್ಟರ್) ಎಂದು ಕರೆಯಲಿ, ನಮ್ಮನ್ನು ಅಲ್ಲ. ಪೂಂಜಾ ಅವರು ಇತ್ತೀಚೆಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ನಾನು 1983ರಲ್ಲಿ ಜನಪ್ರತಿನಿಧಿಯಾಗಿ ಆಯ್ಕೆಯಾದೆ ಮತ್ತು 1985ರಲ್ಲಿ ಮಂತ್ರಿಯೂ ಆಗಿದ್ದೇನೆ ಎಂದರು.

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆ ಕುರಿತು ಮಾತನಾಡಿದ ಸಿಎಂ, 'ಪ್ರತಿಮೆ ಅಸಲಿ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಲು ನಾವು ತನಿಖೆ ನಡೆಸುತ್ತೇವೆ' ಎಂದು ಹೇಳಿದರು.

SCROLL FOR NEXT