ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ; ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. 

ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. 

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಆಯೋಜಿಸಿದ "ಪ್ರೇರಣಾ ಸಮಾರಂಭ" ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲಾ ಸಮುದಾಯಗಳಲ್ಲಿಯೂ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ ಎಂದರು. 

ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದ ಮುಖ್ಯಮಂತ್ರಿ, ನಮಗೆ ಸಹಕರಿಸಿದ ಸಮಾಜದ ಪರವಾಗಿ  ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು. 

ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. 

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು. 

ಜಾತಿಗಣತಿ ವರದಿ ಸ್ವೀಕರಿಸುತ್ತೇವೆ:  ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು. 

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!