ಸಿದ್ದರಾಮಯ್ಯ 
ರಾಜ್ಯ

'ಕರ್ನಾಟಕದ ಮೇಲೆ ಪ್ರೀತಿ ಏಕಿಲ್ಲ': ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಎದುರಿಸುತ್ತಿರುವ ನಿರ್ಣಾಯಕ ಅಂತಾರಾಜ್ಯ ನದಿ ನೀರು ಹಂಚಿಕೆ ವಿವಾದವನ್ನು ಪರಿಹರಿಸುವಲ್ಲಿ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ತೋರಿದ ನಿರಾಸಕ್ತಿಯ ಬಗ್ಗೆ ಕಿಡಿಕಾರಿದ್ದಾರೆ.

ಬೆಂಗಳೂರು: ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಎದುರಿಸುತ್ತಿರುವ ನಿರ್ಣಾಯಕ ಅಂತಾರಾಜ್ಯ ನದಿ ನೀರು ಹಂಚಿಕೆ ವಿವಾದವನ್ನು ಪರಿಹರಿಸುವಲ್ಲಿ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ತೋರಿದ ನಿರಾಸಕ್ತಿಯ ಬಗ್ಗೆ ಕಿಡಿಕಾರಿದ್ದಾರೆ.

ಕರ್ನಾಟಕದ ಸಮಸ್ಯೆಗಳಿಗೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು. ಕಾವೇರಿ ವಿವಾದ, ಮಹದಾಯಿ ನದಿ ಸಮಸ್ಯೆ, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಮೇಕೆದಾಟು ಜಲಾಶಯದಂತಹ ವಿವಾದಾತ್ಮಕ ವಿಷಯಗಳ ಬಗ್ಗೆ ಗಮನಹರಿಸುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ಕರ್ನಾಟಕದ ಹಕ್ಕುಗಳು ಮತ್ತು ಅಗತ್ಯಗಳನ್ನು ಬಹಳ ಹಿಂದಿನಿಂದಲೂ ಕಡೆಗಣಿಸಲಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ನಮ್ಮ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ರಾಜ್ಯದ ಪರವಾಗಿ ನಿಲ್ಲುವ ಸಮಯ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕಕ್ಕೆ ವಿಪತ್ತು ಪರಿಹಾರ ನಿಧಿ ಹಂಚಿಕೆಯಲ್ಲಿನ ಅಸಮಾನತೆಯನ್ನು ಎತ್ತಿ ತೋರಿಸಿದ ಸಿಎಂ, ಹಲವಾರು ವರ್ಷಗಳಿಂದ ಪ್ರಕೃತಿ ವಿಕೋಪಗಳನ್ನು ಎದುರಿಸುತ್ತಿರುವ ರಾಜ್ಯಕ್ಕೆ ಸರಿಯಾಗಿ ಅರ್ಹವಾದ ಆರ್ಥಿಕ ನೆರವು ಸಿಕ್ಕಿಲ್ಲ ಎಂದು ದೂರಿದರು.

ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನವನ್ನು ಬೆಂಬಲಿಸುವಂತೆ ಜನರಿಗೆ ಕರೆ ನೀಡಿದ ಅವರು, ನ್ಯಾಯ ಮತ್ತು ಸಮಾನತೆಯ ವಿಚಾರದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು. ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ರಾಜಕೀಯ ನಂಬಿಕೆಗಳನ್ನು ಲೆಕ್ಕಿಸದೆ, ಭಾರತೀಯ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕಕ್ಕೆ ದೊರಕಬೇಕಿರುವ ಸರಿಯಾದ ಸ್ಥಾನಕ್ಕಾಗಿ ಒಂದಾಗುವುದು ಬಹಳ ಮುಖ್ಯ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ