ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ಬೀದಿ ನಾಯಿಗಳು ದಾಳಿ, ಸಾವು

ಮಂಡ್ಯ ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮಂಡ್ಯ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಗುರುತನ್ನು ಇನ್ನೂ ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ ಸಮೀಪದ ಬೆಸಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ವ್ಯಕ್ತಿ ಬಾರ್‌ನಲ್ಲಿ ಮದ್ಯ ಸೇವಿಸಿ ಹೊರಗೆ ಮಲಗಿದ್ದರು. ಮಧ್ಯರಾತ್ರಿ ಬೀದಿ ನಾಯಿಗಳು ಆತನ ಮೇಲೆ ದಾಳಿ ಮಾಡಿ, ಕೊಂದು ಹಾಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಕಪಕ್ಕದಲ್ಲಿ ಯಾರೂ ಇಲ್ಲದ ಕಾರಣ ಆತನ ಕಿರುಚಾಟ ಯಾರಿಗೂ ಕೇಳಿಸಿಲ್ಲ. ಸಂತ್ರಸ್ತನು ಕೂಡ ಮದ್ಯದ ಅಮಲಿನಲ್ಲಿದ್ದರು.

ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಂತ್ರಸ್ತ ಬೇರೆ ಊರಿನವರು ಎಂದು ತಿಳಿದುಬಂದಿದ್ದು, ಅವರ ಗುರುತನ್ನು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT