ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಎಚ್‌ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ

ಲಘು ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. 

ಬೆಂಗಳೂರು: ಲಘು ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. 

ಲಘು ಪಾರ್ಶ್ವವಾಯುವಿಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. 

'ಅವರಿಗೆ ಯಾವುದೇ ನರವೈಜ್ಞಾನಿಕ ಕೊರತೆ ಕಂಡುಬಂದಿಲ್ಲ ಮತ್ತು ಅವರ ಸಿಟಿ ಸ್ಕ್ಯಾನ್ ಕೂಡ ಸೆರೆಬ್ರಲ್ ಇನ್ಫಾರ್ಕ್ಟ್ ಸಮಸ್ಯೆ ಪರಿಹಾರವಾಗಿದೆ ಎಂದು ತೋರಿಸಿದೆ' ಎಂದು ಆಸ್ಪತ್ರೆಯ ಉಪಾಧ್ಯಕ್ಷ ಮತ್ತು ಘಟಕದ ಮುಖ್ಯಸ್ಥ ಗೋವಿಂದಯ್ಯ ಯತೀಶ್ ಹೇಳಿದರು.

ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ತಮ್ಮ ತಂದೆ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. 'ವೈದ್ಯರ ಸಲಹೆಯಂತೆ ಅವರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ. ನಂತರ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಗುರುವಾರ ಮಾಹಿತಿ ನೀಡಿದ್ದಾರೆ.

ತಂದೆಯ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತರಿಗೂ, ರಾಜ್ಯದ ಜನರಿಗೂ ನಿಖಿಲ್ ಕೃತಜ್ಞತೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT