ಚಿತ್ರವನ್ನು ಪ್ರತಿನಿಧಿಸುವ ಉದ್ದೇಶಕ್ಕಾಗಿ ಬಳಸಲಾಗಿದೆ. 
ರಾಜ್ಯ

ಸೈಬರ್ ಕ್ರೈಮ್ ತಡೆಯಲು ಆನ್‌ಲೈನ್ ಅಪಾಯಗಳನ್ನು ಅರಿತುಕೊಳ್ಳಿ: ಬೆಂಗಳೂರು ನಗರ ಪೊಲೀಸ್ ಕಮಿಷನರ್

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸೈಬರ್ ಅಪರಾಧಗಳಿಂದ ದೂರವಿರಲು ಸಾಮಾಜಿಕ ಮಾಧ್ಯಮಗಳಲ್ಲಿ ಎದುರಾಗುವ ಅಪಾಯಗಳನ್ನು ಗುರುತಿಸುವ ಅಗತ್ಯವನ್ನು ಒತ್ತಿ ಹೇಳಿದರು. ಗುರುವಾರ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಇಂಡಿಯಾ ಸೈಬರ್ ಕ್ರೈಮ್ ಸಮಿಟ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸೈಬರ್ ಅಪರಾಧಗಳಿಂದ ದೂರವಿರಲು ಸಾಮಾಜಿಕ ಮಾಧ್ಯಮಗಳಲ್ಲಿ ಎದುರಾಗುವ ಅಪಾಯಗಳನ್ನು ಗುರುತಿಸುವ ಅಗತ್ಯವನ್ನು ಒತ್ತಿ ಹೇಳಿದರು. 

ಗುರುವಾರ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಇಂಡಿಯಾ ಸೈಬರ್ ಕ್ರೈಮ್ ಸಮಿಟ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

'ಅತಿ ಹೆಚ್ಚು ಯುವಜನರನ್ನು ಹೊಂದಿರುವ ಭಾರತವು ಕ್ಷಿಪ್ರ ತಾಂತ್ರಿಕ ಪ್ರಗತಿಗೆ ಸಾಕ್ಷಿಯಾಗುತ್ತಿದೆ. ಇದು ಸೈಬರ್ ಅಪರಾಧಗಳ ಉಲ್ಬಣಕ್ಕೆ ಕಾರಣವಾಗಿದೆ. ಆದ್ದರಿಂದ ಪ್ರಚಲಿತದಲ್ಲಿರುವ ಆನ್‌ಲೈನ್ ಅಪರಾಧಗಳ ಬಗ್ಗೆ ಯುವಕರು ಜಾಗರೂಕರಾಗಿರುವುದು ಅಗತ್ಯವಾಗಿದೆ. ಇಲ್ಲಿಯವರೆಗೆ, 20,000 ಸೈಬರ್ ಅಪರಾಧ ಸಂಬಂಧಿತ ಪ್ರಕರಣಗಳು ವರದಿಯಾಗಿವೆ' ಎಂದರು.

ತನಿಖೆಯ ಸಮಯದಲ್ಲಿ ತಿಳಿಯುವುದೇನೆಂದರೆ, ಪ್ರಕರಣವು ಬೆಳೆಯುತ್ತಾ ಹೋದಂತೆ ಅಭರ್ದತೆ ಮತ್ತು ಮಾನಸಿಕ ಆರೋಗ್ಯದ ಸವಾಲುಗಳಂತಹ ಅಂಶಗಳು ಬೆಳಕಿಗೆ ಬರುತ್ತವೆ. ಅಪರಾಧಿಗಳು ಸಂತ್ರಸ್ತರನ್ನು ಮೋಸಗೊಳಿಸಲು ಈ ಅಂಶಗಳನ್ನು ಬಳಸಿಕೊಳ್ಳುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಹೆಚ್ಚಿನವುಗಳು ವಾಸ್ತವವಲ್ಲ ಎಂದರು.

ಮಕ್ಕಳಿಗೆ ಶಿಕ್ಷಣ ನೀಡಬೇಕು

ಮಾಜಿ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ಇತರರು ಸೈಬರ್ ಬೆದರಿಕೆಗಳು, ಸವಾಲುಗಳು ಮತ್ತು ಸರ್ಕಾರದ ನೀತಿಗಳು ಮತ್ತು ಕಾರ್ಯತಂತ್ರಗಳ ಕುರಿತು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದರು.

ಮನುಷ್ಯನನ್ನು ವಂಚಿಸಲು ತಾಂತ್ರಿಕ ಪರಿಣತಿಯ ಅಗತ್ಯವಿಲ್ಲ, ಆದರೆ ಇದು ಸರಳವಾಗಿದೆ ಎಂದು ತರಬೇತಿ ವಿಭಾಗದ ಡಿಜಿಪಿ ಪಿ ರವೀಂದ್ರನಾಥ್ ಹೇಳಿದರು. 

ಮಕ್ಕಳು ಸೇರಿದಂತೆ ಶಿಕ್ಷಣ ಪಡೆದವರು ಆನ್‌ಲೈನ್ ವಂಚನೆಗೆ ಬಲಿಯಾಗುತ್ತಾರೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ, ಅಪರಾಧಿಗಳು ಅಪರಾಧಕ್ಕೂ ಮುನ್ನ ಸಂತ್ರಸ್ತರ ನಂಬಿಕೆ ಗಳಿಸುತ್ತಾರೆ. ಪೋಷಕರು ತಮ್ಮ ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆಯ ಬಗ್ಗೆ ಜಾಗೃತರಾಗಿರಬೇಕು ಮತ್ತು ತಮಗೆ ಎದುರಾಗುವ ಅಪಾಯಗಳ ಕುರಿತು ವರದಿ ಮಾಡಲು ಅವರಿಗೆ ಶಿಕ್ಷಣ ನೀಡಬೇಕು ಎಂದು ಅವರು ಸಲಹೆ ನೀಡಿದರು.

'ಜಮ್ತಾರಾ' ಸರಣಿಯನ್ನು ಉಲ್ಲೇಖಿಸಿದ ಮಾಜಿ ಡಿಜಿಪಿ ಅಮರ್ ಕುಮಾರ್ ಪಾಂಡೆ, 'ಸರಣಿಯು ಅಪರಾಧ ಚಟುವಟಿಕೆಗಳ ಮೇಲ್ಮೈಯನ್ನು ಮಾತ್ರ ಚಿತ್ರಿಸುತ್ತದೆ. ಅದು ಕೂಡ ನಿಜವಾಗಿ ಹೆಚ್ಚು ಆಳವಾಗಿದೆ. ಅಂತಹ ಪ್ರಕರಣಗಳನ್ನು ಪೊಲೀಸರಿಗೆ ತಿಳಿಸುವುದು ಮುಖ್ಯವಾಗಿದೆ. ಸಾಂಕ್ರಾಮಿಕ ರೋಗದ ನಂತರ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಏಕೆಂದರೆ, ಜನರು ಫೋನ್ ಬಳಕೆಯ ಸಮಯದ ಜಿಗಿತಕ್ಕೆ ಕಾರಣವಾಗಿದೆ. ಆದ್ದರಿಂದ, ಸರ್ಕಾರಿ ವೆಬ್‌ಸೈಟ್‌ಗಳು ಅನಾಮಧೇಯ ದೂರು ನೋಂದಣಿ ಆಯ್ಕೆಗಳನ್ನು ನೀಡುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಆದ್ದರಿಂದ ಗುರುತನ್ನು ಬಹಿರಂಗಪಡಿಸದೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT