ಮಗು (ಸಾಂಕೇತಿಕ ಚಿತ್ರ) 
ರಾಜ್ಯ

ವಿಷಪ್ರಾಶನ ಮಾಡಿಸಿ ಮಗುವನ್ನು ಕೊಂದ ಮಲತಾಯಿ!

ಮಗುವಿಗೆ ವಿಷ ಹಾಕಿ ಮಲತಾಯಿಯೋರ್ವಳು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ವರದಿಯಾಗಿದೆ.

ಯಾದಗಿರಿ: ಮಗುವಿಗೆ ವಿಷ ಹಾಕಿ ಮಲತಾಯಿಯೋರ್ವಳು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ವರದಿಯಾಗಿದೆ.

ಮಹಿಳೆ ಹಾಲಿನಲ್ಲಿ ಕ್ರಿಮಿನಾಶಕ ಬೆರೆಸಿ 5 ತಿಂಗಳ ಮಗುವಿಗೆ ಕುಡಿಸಿ ಹತ್ಯೆ ಮಾಡಿದ್ದಾಳೆ 

ಬಬಲ ಗ್ರಾಮದಲ್ಲಿ ಆ.30 ರಂದು ಈ ಘಟನೆ ವರದಿಯಾಗಿದೆ.  ಪೊಲೀಸ್ ಅಧಿಕಾರಿಗಳ ಮಾಹಿತಿಯ ಪ್ರಕಾರ, ಸಿದ್ಧಪ್ಪ ಎಂಬುವವರ ಮೊದಲ ಪತ್ನಿ ಶ್ರೀದೇವಿಗೆ ಮಕ್ಕಳಾಗಿರಲಿಲ್ಲ. ಈ ಕಾರಣದಿಂದ ಆತ ದೇವಮ್ಮ ಎಂಬ ಮಹಿಳೆಯನ್ನು ವಿವಾಹವಾಗಿದ್ದ. ಈ ದಂಪತಿಗೆ 4 ಮಕ್ಕಳಿದ್ದರು. ಆದರೆ ಇತ್ತೀಚೆಗೆ ಶ್ರೀದೇವಿ ಸಹ ಹೆಣ್ಣುಮಗುವೊಂದಕ್ಕೆ ಜನ್ಮ ನೀಡಿದ್ದರು. ಆ ಮಗುವಿಗೆ ಸಂಗೀತ ಎಂದು ನಾಮಕರಣ ಮಾಡಲಾಗಿತ್ತು.

ಆಸ್ತಿಯಲ್ಲಿ ಶ್ರೀದೇವಿ ಮಗುವಿಗೆ ಪಾಲು ಹೋಗುತ್ತದೆಂದು ಯೋಚಿಸಿದ ದೇವಮ್ಮ ಮಗುವಿಗೆ ಹಾಲಿನಲ್ಲಿ ಕ್ರಿಮಿನಾಶಕ ಹಾಕಿ ಸಾಯಿಸಿದ್ದಾಳೆ. ವದಗೆರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದೇವಮ್ಮ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT