ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ 
ರಾಜ್ಯ

ಖಾಸಗಿ ಸಾರಿಗೆ ಒಕ್ಕೂಟಗಳಿಂದ ಬೆಂಗಳೂರು ಬಂದ್ ಗೆ ಕರೆ: ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸುವೆ ಎಂದ ಡಿಸಿಎಂ

ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ತಿಳಿಸಿದ್ದಾರೆ. 

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ತಿಳಿಸಿದ್ದಾರೆ. 

ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಗೆ ಕರೆ ನೀಡಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡಿದ್ದಾರೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ತಮ್ಮ ವಹಿವಾಟು ತೀವ್ರ ಕುಸಿದಿದೆ ಎಂದು ಖಾಸಗಿ ಸಾರಿಗೆ ಸಂಸ್ಥೆಗಳ ಮಾಲೀಕರು ದೂರುತ್ತಿದ್ದಾರೆ. ಆಟೋ ರಿಕ್ಷಾ ಚಾಲಕರು, ಖಾಸಗಿ ಟ್ಯಾಕ್ಸಿ ಚಾಲಕರು, ಶಾಲಾ ಬಸ್ ಮತ್ತು ಕ್ಯಾಬ್ ಮಾಲೀಕರು ಸೇರಿದಂತೆ ಸುಮಾರು 32 ಸಂಸ್ಥೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. 

ಪ್ರತಿ ಚಾಲಕನಿಗೆ ರೂ 10,000 ಆರ್ಥಿಕ ನೆರವು ಮತ್ತು ಬೈಕ್ ಟ್ಯಾಕ್ಸಿ ನಿಷೇಧ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈ ಹಿಂದೆ ಒಕ್ಕೂಟ ಸರ್ಕಾರಕ್ಕೆ ಸಲ್ಲಿಸಿತ್ತು. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್‌ಗಳಿಲ್ಲ, ಖಾಸಗಿ ಬಸ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಕೆಲವೆಡೆ ಜನರು ಖಾಸಗಿ ಸಾರಿಗೆ ಸೌಲಭ್ಯಗಳನ್ನು ಬಳಸುತ್ತಿಲ್ಲ ಎಂದು ನಮಗೆ ತಿಳಿದಿದೆ.ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ರಾಮಲಿಂಗಾರೆಡ್ಡಿ ಜೊತೆಗೆ ಚರ್ಚಿಸುತ್ತೇನೆ ಎಂದರು. 

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಮೊದಲ ಭರವಸೆ ಯೋಜನೆ ಶಕ್ತಿ ಯೋಜನೆ. ಈ ಯೋಜನೆಯು ರಾಜ್ಯಾದ್ಯಂತ ಐಷಾರಾಮಿ ವಾಹನಗಳನ್ನು ಹೊರತುಪಡಿಸಿ ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುತ್ತದೆ. ಶಕ್ತಿ ಯೋಜನೆಯಡಿ ಇದುವರೆಗೆ 48.5 ಕೋಟಿ ಮಹಿಳೆಯರು ಮುಕ್ತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT