ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿ

 ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ಬೆಂಗಳೂರು :  ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ತೀವ್ರ ಜ್ವರ ಹಾಗೂ ಮೈಲ್ಡ್ ಸ್ಟ್ರೋಕ್ ಆಟ್ಯಾಕ್ ಆಗಿದ್ದರಿಂದ ಆಗಸ್ಟ್ 30 ನಸುಕಿನ ಜಾವ ಬೆಂಗಳೂರಿನ ಜನಯನಗರದಲ್ಲಿ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಎರಡು ದಿನಗಳ ಕಾಲ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ಶುಕ್ರವಾರ ಐಸಿಯುನಿಂದ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ಇದೀಗ ಕುಮಾರಸ್ವಾಮಿ ಗುಣಮುಖರಾಗಿದ್ದರಿಂದ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. 

ಡಿಸ್ಚಾರ್ಜ್​ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಭಗವಂತನ ದಯೆ ಹಾಗೂ ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ 5 ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು. ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ‌ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ ಎಂದರು. 

ರಾಜಕೀಯ ಹೊರತುಪಡಿಸಿ ಎರಡು ಮೂರು ವಿಚಾರ ಮಾತನಾಡುತ್ತೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಕುಮಾರಸ್ವಾಮಿ, ಆಸ್ಪತ್ರೆಗೆ ದಾಖಲಾಗುವ ಮೊದಲು ಫ್ಯಾಮಿಲಿ ವೈದ್ಯ ಮಂಜುನಾಥಗೆ ಫೋನ್ ಮಾಡಿದ್ದೆ. ನಂತರ ಅಫೋಲೋ ಆಸ್ಪತ್ರೆ ತಜ್ಞ ವೈದ್ಯ ಯತೀಂದ್ರ, ಸತೀಶ್ ಸಲಹೆಯಂತೆ ಬುಧವಾರ ಬೆಳಗ್ಗೆ 3:30ರ ಸುಮಾರಿಗೆ ಆಸ್ಪತ್ರೆಗೆ ದಾಖಲಾದೆ. ನನ್ನ ಅದೃಷ್ಟ ನುರಿತ ತಜ್ಞ ವೈದ್ಯರು ಬೆಂಗಳೂರಿನಲ್ಲೇ ಇದ್ದರು. ತಿಂಗಳಿನಲ್ಲಿ 15 ದಿನ ಅವರು ಹೊರ ದೇಶದಲ್ಲೇ ಇರುತ್ತಿದ್ದರು. ನಿರ್ಲಕ್ಷ್ಯ ಮಾಡದೆ ಕ್ಷಣಕ್ಷಣಕ್ಕೂ ನನ್ನ ಆರೋಗ್ಯ ಸ್ಥಿತಿ ಚೆನ್ನಾಗಿ ನೋಡಿಕೊಂಡರು. ಕೇವಲ 1 ಗಂಟೆಯಲ್ಲೇ ನನ್ನನ್ನ ಮೊದಲ ಸ್ಥಿತಿಗೆ ತಂದರು ಎಂದು ವೈದ್ಯರ ಚಿಕಿತ್ಸೆ ಬಗ್ಗೆ ವಿವರಿಸಿದರು.

ಮಧ್ಯ ರಾತ್ರಿ 2 ಗಂಟೆ ಸೂಮಾರಿಗೆ ಹುಷಾರ್ ತಪ್ಪಿತ್ತು. ಕೂಡಲೇ ಮಂಜುನಾಥ್ ಅವರಿಗೆ ಕರೆ ಮಾಡಿದೆ, ನಂತರ ಸತೀಶ್ ಜಯಚಂದ್ರ ಅವರಿಗೆ ಕರೆಮಾಡಿದೆ. ಕೇವಲ 20 ನಿಮಿಷದಲ್ಲಿ ಆಸ್ಪತ್ರೆಗೆ ದಾಕಲಾದೆ. ನನ್ನ ಆರೋಗ್ಯ ಕ್ಷೇಮದ ಬಗ್ಗೆ ವಿಚಾರಿಸದವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಗೋಲ್ಡನ್ ಟೈಂ ಬಹಳ ಮುಖ್ಯ: ಪಾರ್ಶ್ವವಾಯು ಆದಾಗ ಯಾವಾಗ ರೀತಿ ಸ್ಪಂದಿಸಬೇಕು ಎಂದು ಈಗಷ್ಟೇ ವೈದ್ಯರು ಹೇಳಿದ್ದಾರೆ. ಇದನ್ನ ನಿರ್ಲಕ್ಷ್ಯ ಮಾಡಬೇಡಿ. ಇದು ಗೋಲ್ಡನ್ ಟೈಂ. ಜೀವನ ಪರ್ಯಂತ ಕಾಡುವಂತೆ ಮಾಡಿಕೊಳ್ಳುವುದು ಬೇಡ. ಇದು ಮೂರನೇ ಜನ್ಮವನ್ನು ನನಗೆ ಭಗವಂತ ಕೊಟ್ಟಿದ್ದಾನೆ. 64 ವರ್ಷದಲ್ಲಿ ಮೂರು ಬಾರಿ ಮರುಜನ್ಮ ಪಡೆದಿದ್ದೇನೆ. ವೈದ್ಯಕೀಯ ಹಾಗೂ ಭಗವಂತನ ದಯೆಯಿಂದ ಇಳಿದಿದ್ದೇನೆ. ನಾನು ನಿರ್ಲಕ್ಷ್ಯ ಮಾಡಿದಿದ್ದರೆ ನಿಮ್ಮೊಂದಿಗೆ ಈಗ ಸಹಜವಾಗಿ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಈ ಹಿಂದೆಯೂ  ಎಡಭಾಗ ಸ್ವಾಧೀನ ಕಳೆದುಕೊಂಡಿದ್ದೆ, ಮೂರು ಬಾರಿ ಪುನರ್ಜನ್ಮ ಸಿಕ್ಕಿದೆ: ಎರಡನೇ ಬಾರಿ ನನಗೆ ಪಾರ್ಶ್ವವಾಯು ಆಗಿದೆ. ಎರಡನೇ ಬಾರಿ ಸಿಎಂ ಆದಾಗ ವಾಲ್ಮೀಕಿ‌ ಜಯಂತಿಯಂದು ಟಿವಿ ವಾಹಿನಿಯೊಂದರಲ್ಲಿ ಕತ್ತಲತ್ತ ತೆರಳಿದ ಕರ್ನಾಟಕ ಎಂದು ಒಂದು ಕಾರ್ಯಕ್ರಮದ ಪ್ರೋಮೊ ಬಂದಿತ್ತು. ಅದನ್ನು ನೋಡಿ ಆಗ ಆಘಾತಕ್ಕೆ ಒಳಗಾಗಿ ಎಡಭಾಗ ಸ್ವಾಧೀನ ಕಳೆದುಕೊಂಡಿದ್ದೆ. ಅವತ್ತು ವೈದ್ಯರು ನೋಡಿದಾಗ ಪಾರಾದೆ. ಆದರೆ ಈ ಬಾರಿ ಹೆಚ್ಚಾಗಿ ಡ್ಯಾಮೇಜ್ ಆಗಿದೆ. ಭಗವಂತನ ದಯೆಯಿಂದ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಪಾರ್ಶ್ವವಾಯುವನ್ನು ಒಂದು ಕ್ಷಣವನ್ನೂ ವ್ಯರ್ಥ ಮಾಡಬೇಡಿ. ಕುಟುಂಬದಲ್ಲಿ ಯಾರಿಗಾದ್ರೂ ಬಂದಾಗ ಕೂಡಲೇ ಚಿಕಿತ್ಸೆ ಕೊಡಿಸಿ. ಹಣದ ಬಗ್ಗೆ ಯೋಚಿಸಬೇಡಿ, ಜೀವ ಉಳಿಸಿ ಎಂದು ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT